ನವದೆಹಲಿ: ಕನಿಷ್ಠ ಬೆಂಬಲ ಬೆಲೆ (MSP) ಕುರಿತು ಚರ್ಚೆಗೆ ಒತ್ತಾಯಿಸಿ ಪಂಜಾಬ್‌ನ ರೈತರು ಈ ವಾರ ದೆಹಲಿಗೆ ಪ್ರತಿಭಟನಾ ಮೆರವಣಿಗೆ (farmers’ march) ನಡೆಸುವುದಾಗಿ ಘೋಷಿಸಿದ್ದಾರೆ. ಭಾರತೀಯ ಕಿಸಾನ್ ಪರಿಷತ್ (BKP) ನೇತೃತ್ವದ ರೈತರ ಮೊದಲ ಗುಂಪು ಇಂದು ತಮ್ಮ ನೋಯ್ಡಾದಿಂದ ದೆಹಲಿ ವರೆಗೆ ಮೆರವಣಿಗೆ ಪ್ರಾರಂಭಿಸಲಿದೆ. ಈ ಹಿನ್ನೆಲೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್‌ಗಳನ್ನ ಅಳವಡಿಸಿದ್ದಾರೆ.
ಅಲ್ಲದೆ, ನೋಯ್ಡಾದಿಂದ ದೆಹಲಿಗೆ (Dehli) ಪ್ರಯಾಣಿಸುವ ಪ್ರಯಾಣಿಕರಿಗೆ ಅನಗತ್ಯ ಪ್ರಯಾಣ ಕೈಗೊಳ್ಳದಂತೆ ಸಲಹೆಗಳನ್ನು ನೀಡಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇ ಮತ್ತು ನೋಯ್ಡಾ-ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ ಮುಂತಾದ ಮಾರ್ಗಗಳಿಂದ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸಿಎಂ, ಡಿಸಿಎಂ ನಿಜವಾದ ಕಾನೂನು ಪಾಲಕರಾಗಿದ್ರೆ ನಾನು ಸಾಷ್ಟಾಂಗ ನಮಸ್ಕಾರ ಮಾಡ್ತೇನೆ – ಅಶ್ವಥ್ ನಾರಾಯಣ
ಫೆಬ್ರುವರಿ 13ರಿಂದ ರೈತರು, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮನ್ಸೂರ್ ಮೋರ್ಚಾ (ಕೆಎಂಎಂ) ನೇತೃತತ್ವದಲ್ಲಿ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿ ಪ್ರವೇಶಿಸದಂತೆ ಭದ್ರತಾ ಸಿಬ್ಬಂದಿ ಅವರನ್ನು ನಿರ್ಬಂಧಿಸಿದೆ. ಹೀಗಾಗಿ 200ಕ್ಕೂ ಹೆಚ್ಚು ಧರಣಿ ನಿರತ ರೈತರು ರಸ್ತೆಯಲ್ಲೇ ರಾತ್ರಿ ಕಳೆಯುವಂತಾಗಿದೆ.
ಪ್ರತಿಭಟನಾ ನಿರತ ರೈತರು ಮಧ್ಯಾಹ್ನದ ವೇಳೆಗೆ ನೋಯ್ಡಾದ ಮಹಾ ಮಾಯಾ ಮೇಲ್ಸೇತುವೆಯಿಂದ ತಮ್ಮ ಮೆರವಣಿಗೆ ಪ್ರಾರಂಭಿಸಲಿದ್ದಾರೆ. ಹೀಗಾಗಿ ದೆಹಲಿಗೆ ಹೋಗುವ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಡಿಸೆಂಬರ್ 6 ರಿಂದ ಮತ್ತೊಂದು ಸುತ್ತಿನ ಪ್ರತಿಭಟನೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಮೆರವಣಿಗೆ ನಡೆಯಲಿದ್ದು, ಹೆಚ್ಚಿನ ರೈತರು ಪ್ರತಿಭಟನೆಗೆ ಧುಮುಕಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉತ್ತರ ಕನ್ನಡ| ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ದುರ್ಮರಣ
ರೈತರ ಬೇಡಿಕೆಗಳೇನು?
ಗುತ್ತಿಗೆ ಆಧಾರದಲ್ಲಿ ಕೃಷಿಯನ್ನ ತಿರಸ್ಕರಿಸಬೇಕು, ಕನಿಷ್ಠ ಬೆಂಬಲ ಬೆಲೆ ಜಾರಿಗೊಳಿಸಬೇಕು. 2014ರ ಜನವರಿ 1ರ ನಂತರ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಶೇ.10ರಷ್ಟು ನಿವೇಶನ ಹಂಚಿಕೆ, ಹಳೇ ಸ್ವಾಧೀನ ಕಾನೂನಿನಡಿ ಪರಿಹಾರ ನೀಡಬೇಕು, ಶೇ.20ರಷ್ಟು ನಿವೇಶನ ನೀಡಬೇಕು. ಭೂರಹಿತ ರೈತರಿಗೆ ಉದ್ಯೋಗ ಮತ್ತು ಪುನರ್ವಸತಿ ಕಲ್ಪಿಸಬೇಕು. ಅಲ್ಲದೇ ಕೃಷಿ ಸಾಲ ಮನ್ನಾ ಮಾಡಬೇಕು, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ಸೌಲಭ್ಯ ದರದಲ್ಲಿ ಕಡಿತ, ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡಬೇಕು. ಭೂಸ್ವಾಧೀನ ಕಾಯಿದೆ, 2013 ಮತ್ತು ಹಿಂದಿನ ಆಂದೋಲನದ ವೇಳೆ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಕಿಸಾನ್ ಮಜ್ದೂರ್ ಮೋರ್ಚಾ (KMM) ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಫೆಬ್ರವರಿ 18 ರಿಂದ ರೈತರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ. ರೈತರು ಗುತ್ತಿಗೆ ಕೃಷಿಯನ್ನು ತಿರಸ್ಕರಿಸುತ್ತಾರೆ, ಬದಲಿಗೆ ಬೆಳೆಗಳಿಗೆ ಎಂಎಸ್‌ಪಿ ಮೇಲೆ ಕಾನೂನು ಖಾತ್ರಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ ರೈ ಅವರ ಮೂರು ಸದಸ್ಯರ ಸಮಿತಿ ಫೆಬ್ರವರಿ 18 ರಂದು ರೈತ ಪ್ರತಿನಿಧಿಗಳನ್ನು ಭೇಟಿ ಮಾಡಿತ್ತು, ಆದ್ರೆ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಎಂಎಸ್‌ಪಿಯಲ್ಲಿ 5 ವರ್ಷಗಳವರೆಗೆ ಖರೀದಿಸುವ ಪ್ರಸ್ತಾಪವನ್ನು ಇಟ್ಟಿದ್ದರು. ಇದನ್ನು ರೈತರು ತಿರಸ್ಕರಿಸಿದರು.