ನವದೆಹಲಿ: ಈ ಬಾರಿಯ 75ನೇ ಸ್ವಾತಂತ್ರ‍್ಯ ದಿನಾಚರಣೆಗೂ ಮುನ್ನವೇ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಹಾಗೂ ಇತರೇ ಉಗ್ರ ಸಂಘಟನೆಗಳಿಂದ ಭಯೋತ್ಪಾದನಾ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರೀಯ ಗುಪ್ತಚರ ಇಲಾಖೆ (ಐಬಿ) ಎಚ್ಚರಿಸಿದೆ.
Advertisement
ಲಷ್ಷರ್, ಜೆಇಎಂ ಮತ್ತು ಇತರೆ ಕೆಲವು ಭಯೋತ್ಪಾದನಾ ಸಂಘಟನೆಗಳಿಂದ ದಾಳಿಯ ಅಪಾಯವಿರುವ ಬಗ್ಗೆ ಐಬಿ 10 ಪುಟಗಳ ವರದಿ ನೀಡಿದ್ದು, ರೋಹಿಂಗ್ಯಾ, ಅಫ್ಘಾನಿಸ್ತಾನ ಹಾಗೂ ಸುಡಾನ್ ದೇಶದ ಹೆಚ್ಚಿನ ಜನರು ವಾಸಿಸುವ ದೆಹಲಿಯಲ್ಲಿ ಹದ್ದಿನಕಣ್ಣು ಇಡುವಂತೆ ಹಾಗೂ ಟಿಫಿನ್ ಬಾಂಬ್, ಸ್ಟಿಕ್ಕಿ ಬಾಂಬ್ ಮತ್ತು ವಿವಿಐಡಿ ಬೆದರಿಕೆಯನ್ನು ಎದುರಿಸಲು ಜಾಗರೂಕರಾಗಿರುವಂತೆ ಹೇಳಿದೆ. ಇದನ್ನೂ ಓದಿ: CommonwealthGames: ಬೆಳ್ಳಿಗೆ ಮುತ್ತಿಟ್ಟ ಭಾರತದ ವನಿತೆ ತುಲಿಕಾ ಮಾನ್
Advertisement
ಆಗಸ್ಟ್ 15 ರಂದು ಸ್ವಾತಂತ್ರ‍್ಯ ದಿನಾಚರಣೆಗೂ ಮುನ್ನ ಕೆಂಪುಕೋಟೆಗೆ ಪ್ರವೇಶಿಸಲು ಕಠಿಣ ನಿಯಮಗಳನ್ನು ಜಾರಿಗೊಳಿಸುವಂತೆ ಅದು ದೆಹಲಿ ಪೊಲೀಸರಿಗೆ ಸೂಚಿಸಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಮೇಲಿನ ದಾಳಿ, ಉದಯಪುರ ಹತ್ಯೆ ಹಾಗೂ ಅಮರಾವತಿಗಳಲ್ಲಿ ನಡೆದ ಘಟನೆಗಳನ್ನೂ ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.
Advertisement
Advertisement
ಸ್ವಾತಂತ್ರ‍್ಯ ದಿನಾಚರಣೆ ಸಂಭ್ರಮವನ್ನು ಕೆಡಿಸುವ ಹಾಗೂ ಜೀವಹಾನಿ ಮಾಡುವ ಉದ್ದೇಶದಿಂದ ದಾಳಿಗಳನ್ನು ನಡೆಸಲು ಸಂಚು ರೂಪಿಸಲಾಗಿದೆ. ಹೀಗಾಗಿ ಎಲ್ಲ ಉಗ್ರ ಗುಂಪುಗಳ ಮೇಲೆ ನಿಗಾ ಇರಿಸಬೇಕು ಎಂದು ಎಲ್ಲ ರಾಜ್ಯಗಳಿಗೂ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಕಾಮನ್‌ವೆಲ್ತ್‌ನಲ್ಲಿ ಭಾರತದ ಕಮಾಲ್- ಸ್ಕ್ವಾಷ್‌ನಲ್ಲಿ ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೌರವ್
ದೆಹಲಿ ಪೊಲೀಸರು ಬಹಳ ಜಾಗರೂಕತೆಯಿಂದ ಇರುವಂತೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಆಗಸ್ಟ್ 15ರಂದು ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಪ್ರವೇಶ ನಿಯಮಗಳನ್ನು ಕಠಿಣಗೊಳಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಬೇಹುಗಾರಿಕಾ ಸಂಸ್ಥೆಗಳು, ಉಗ್ರ ಗುಂಪುಗಳು ಹಾಗೂ ಜನನಿಬಿಡ ಸ್ಥಳಗಳಲ್ಲಿ ಅವುಗಳ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು ಇರಿಸುವಂತೆ ನಿರ್ದೇಶನ ನೀಡಲಾಗಿದೆ.
ಜೈಶ್ ಮತ್ತು ಲಷ್ಕರ್ ಉಗ್ರರಿಗೆ ಸಾಮಗ್ರಿಗಳ ಪೂರೈಕೆ ನೆರವು ನೀಡುವ ಮೂಲಕ ಪಾಕಿಸ್ತಾನದ ಐಎಸ್‌ಐ, ಭಯೋತ್ಪಾದನಾ ದಾಳಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ದೊಡ್ಡ ನಾಯಕರು ಮತ್ತು ಪ್ರಮುಖ ಸ್ಥಳಗಳನ್ನು ಗುರಿ ಮಾಡುವಂತೆ ಜೆಇಎಂ ಹಾಗೂ ಎಲ್‌ಇಟಿ ಸಂಘಟನೆಗಳಿಗೆ ಸೂಚನೆ ನೀಡಲಾಗಿದೆ ಎಂದು ವರದಿ ಹೇಳಿದೆ.