DistrictsKarnatakaLatestMain PostShivamogga

ಮೋದಿ ತಿಂಗಳಿಗೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ – ಪ್ರಚಾರಕ್ಕೂ ಬರುತ್ತಾರೆ: ಬಿಎಸ್‍ವೈ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ಎಲ್ಲರನ್ನೂ ಸೇರಿಸಿಕೊಂಡು ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ತರುತ್ತೇವೆ. ಪ್ರಧಾನಿ ಅವರೇ ತಿಂಗಳಿಗೊಮ್ಮೆ ರಾಜ್ಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಚುನಾವಣೆ ಸಿದ್ಧತೆ ಬಗ್ಗೆ ಹೇಳಿಕೊಂಡಿದ್ದಾರೆ.

bjP
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೋದಿ ಚುನಾವಣೆ ವೇಳೆ ನನ್ನನ್ನು ಕೇಂದ್ರೀಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ. ಮುಂದಿನ ಚುನಾವಣೆಗೆ ರಾಜ್ಯದ ಉದ್ದಗಲಕ್ಕೂ ಸಂಚರಿಸಿ 150 ಸ್ಥಾನಗಳನ್ನು ಗೆಲ್ಲಿಸುತ್ತೇನೆ. ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಿದ ವೇಳೆ ಸಹ ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ ನೀಡಿದ್ದಾರೆ. ಇದನ್ನೂ ಓದಿ: ತನಿಖೆಗೆ ಸಹಕರಿಸದೇ ಮುರುಘಾ ಶ್ರೀ ಮತ್ತೆ ಆಸ್ಪತ್ರೆ ಸುತ್ತಾಟ

ಎಲ್ಲರನ್ನೂ ಬಳಸಿಕೊಂಡು ರಾಜ್ಯ ಪ್ರವಾಸ ಮಾಡುತ್ತೇವೆ. ಪ್ರಚಾರಕ್ಕೆ ಮೋದಿಯವರೂ ಬರುವುದಾಗಿ ಹೇಳಿದ್ದಾರೆ. ಎಲ್ಲರನ್ನೂ ಸೇರಿಸಿಕೊಂಡು ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರುತ್ತೇವೆ. ಶಿವಮೊಗ್ಗ ಜಿಲ್ಲೆಯ ನಾಯಕರ ಜೊತೆ ಚರ್ಚಿಸಿ, ಎಲ್ಲರೂ ಒಪ್ಪಿದಲ್ಲಿ ಶೀಘ್ರದಲ್ಲಿಯೇ ದಿನಾಂಕ ನಿಗದಿಪಡಿಸಿ ಶಿವಮೊಗ್ಗಕ್ಕೆ ಮೋದಿ ಅವರನ್ನು ಕರೆಸುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಹರ್ಷ ಕೊಲೆ ಸಂಚು ಬಹಿರಂಗ- ಹಿಂದೂ ಸಂಘಟನೆಗಳ ಸದ್ದಡಗಿಸಲು ಮರ್ಡರ್

Live Tv

Leave a Reply

Your email address will not be published.

Back to top button