Friday, 20th July 2018

Recent News

ಜಸ್ಟ್ 1 ವಿಡಿಯೋದಲ್ಲೇ ಇಂಟರ್ ನ್ಯಾಷನಲ್ ಸೆನ್ಸೇಷನ್! – ಕಣ್ಣೋಟದಿಂದಲೇ ಹುಡುಗರ ಮನಗೆದ್ದ ನಟಿ!

ಹೈದರಾಬಾದ್: ಫೆ.14ರ ಪ್ರೇಮಿಗಳ ದಿನಚಾರಣೆ ವಿಶೇಷವಾಗಿ ಬಿಡುಗಡೆಯಾಗಿರುವ ಮಲೆಯಾಳಂ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗಿದೆ. ಈಗಾಗಲೇ 40 ಲಕ್ಷಕ್ಕೂ ಹೆಚ್ಚು ವೀಕ್ಷಣೆಯಾಗುವ ಮೂಲಕ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ವಿಡಿಯೋ ಆಗಿದೆ.

ಪ್ರೇಮಿಗಳ ದಿನಾಚರಣೆಗೆ ಹಲವರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ಇದೇ ವೇಳೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಲೆಯಾಳಂ ಹಾಡೊಂದು ಬಿಡುಗಡೆಯಾಗಿದ್ದು ಸಖತ್ ಸೌಂಡ್ ಮಾಡಿದೆ. `ಒರು ಆಡಾರ್ ಲವ್’ ಹೆಸರಿನ ಸಿನಿಮಾದ `ಮಾಣಿಕ್ಯಾ ಮಾಲಾರಾಯಾ ಪೂವಿ’ ಹಾಡಿನಲ್ಲಿ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ಣುಗಳು ಸಿನಿಪ್ರಿಯರನ್ನು ಮೋಡಿ ಮಾಡಿದೆ.

ಹಾಡಿನಲ್ಲಿನ ಆಕೆಯ ಕಣ್ಣಿನ ನೋಟ ಎಂಥವರನ್ನು ಕ್ಷಣಕಾಲ ಮಗ್ನಗೊಳಿಸುವಂತೆ ಮಾಡುತ್ತಿದೆ. ಪ್ರಸ್ತುತ ಈ ಹಾಡಿನ ತುಣುಕನ್ನು ಪ್ರತಿ ಹುಡುಗರು ಸಾಮಾಜಿಕ ಜಾಲತಾಣಗಳ ಸ್ಟೇಟಸ್ ಆಗಿ ಹಾಕುತ್ತಿದ್ದಾರೆ.

ಅಂದಹಾಗೇ ನಟಿ ಪ್ರಿಯಾ ಪ್ರಕಾಶ್ ಕೇರಳದ ತ್ರಿಶ್ಯೂರ್ ಮೂಲದವರು. ಪ್ರಸ್ತುತ ಅಲ್ಲಿನ ಸ್ಥಳೀಯ ಕಾಲೇಜಿನಲ್ಲಿ ಬಿಕಾಂ ಪದವಿ ಮಾಡುತ್ತಿದ್ದಾರೆ. ಸಿನಿಮಾ ಆಡಿಷನ್ ವೇಳೆ ಇವರಿಗೆ ಸಣ್ಣ ಪಾತ್ರವನ್ನು ನೀಡಲಾಗಿದ್ದು, ಆದರೆ ಇದೀಗ ಈ ಪಾತ್ರದ ಮೂಲಕವೇ ಎಲ್ಲರ ಗಮನಸೆಳೆದಿದ್ದಾರೆ. ಚಿತ್ರದ ಹಾಡು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗುತ್ತಿದಂತೆ ಮಲಯಾಳಂ ಮಾತ್ರವಲ್ಲದೇ ಟಾಲಿವುಡ್, ಬಾಲಿವುಡ್ ನಲ್ಲೂ ಹೆಚ್ಚು ವೈರಲ್ ಆಗಿದೆ. ಇನ್ನು ಈ ಚಿತ್ರ ಏಪ್ರಿಲ್ ನಲ್ಲಿ ತೆರೆ ಕಾಣಲಿದೆ ಎಂದು ಚಿತ್ರ ತಂಡ ತಿಳಿಸಿದೆ.

ಸಾಮಾಜಿಕಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದಂತೆ ಚಿತ್ರತಂಡ ಹರ್ಷ ವ್ಯಕ್ತಪಡಿಸಿದೆ. ಈ ಕುರಿತು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿರುವ ನಟಿ ಪ್ರಿಯಾ ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಕೇವಲ ಒಂದು ಚಿತ್ರದ ಹಾಡಿನ ಮೂಲಕ ಪ್ರಿಯಾ ಆಪಾರ ಅಭಿಮಾನಿ ಬಳಗವನ್ನು ಪಡೆದಿದ್ದು, ಇವರ ಇನ್ ಸ್ಟಾಗ್ರಾಮ್ ಖಾತೆಗೆ 1.87 ಲಕ್ಷ ಜನರ ಫಾಲೋ ಮಾಡುತ್ತಿದ್ದಾರೆ. ಅಭಿಮಾನಿಗಳ ಪ್ರೀತಿ ಹೆಚ್ಚು ಸಂತೋಷ ಉಂಟುಮಾಡಿದೆ ಎಂದು ಪ್ರಿಯಾ ತಿಳಿಸಿದ್ದಾರೆ.

ನಮ್ಮ ಸಿನಿಮಾ ಏಪ್ರಿಲ್ ನಲ್ಲಿ ರಿಲೀಸ್ ಆಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಇದೇ ರೀತಿ ಸಪೋರ್ಟ್ ಮಾಡಿ. ಶುರುವಿನಿಂದ ನನಗೆ ನಟನೆ ಎಂದರೆ ಇಷ್ಟವಿತ್ತು. ಶಾಲೆಯಲ್ಲೂ ಡ್ಯಾನ್ಸ್, ಡ್ರಾಮಾ ಮಾಡುತ್ತಿದ್ದೆ. ಹಲವು ಶಾರ್ಟ್ ಫಿಲ್ಮ್ ಗಳನ್ನು ಮಾಡಿದ್ದೇನೆ ಎಂದು ತಿಳಿದ್ದಾರೆ.

Thank you for all the love and support💙

A post shared by priya prakash varrier (@priya.p.varrier) on

Leave a Reply

Your email address will not be published. Required fields are marked *