ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

Public TV
1 Min Read
Ahmedabad Air India Plane Crash 2

ಗಾಂಧೀನಗರ: ಅಹಮದಾಬಾದ್‌ನಲ್ಲಿ (Ahmedabad) ಸಂಭವಿಸಿದ ಏರ್‌ ಇಂಡಿಯಾ (Air India) ಬೋಯಿಂಗ್‌ ಡ್ರೀಮ್‌ಲೈನರ್‌ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.

ಈ ಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್‌ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

Air India Bird Hit Ahmedabad Plane Crash

ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಅಪಘಾತದಲ್ಲಿ ಬದುಕುಳಿದರು.

ದುರಂತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನದಲ್ಲಿದ್ದ ಎರಡು ಬ್ಲ್ಯಾಕ್‌ಬಾಕ್ಸ್‌ಗಳ ಪೈಕಿ ಒಂದು ಪತ್ತೆಯಾಗಿದೆ. ಅದನ್ನು ಅಧಿಕಾರಿಗಳ ತಂಡ ಕೊಂಡೊಯ್ದಿದೆ. ಮತ್ತೊಂದು ಬ್ಲ್ಯಾಕ್‌ಬಾಕ್ಸ್‌ಗಾಗಿ ಹುಡುಕಾಟ ನಡೆದಿದೆ. ಇದನ್ನೂ ಓದಿ: ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?

ಅಪಘಾತ ಸಂಭವಿಸಿದ ಮಾರನೇ ದಿನ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

Share This Article