ಅಹಮದಾಬಾದ್ : 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ (Ahmedabad Serial Blasts Court) ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿದೆ.
ಪ್ರಕರಣದ 49 ಅಪರಾಧಿಗಳಲ್ಲಿ 38 ಮಂದಿಗೆ ಮರಣದಂಡನೆ ಹಾಗೂ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ವಿಶೇಷ ನ್ಯಾಯಲಯ ತೀರ್ಪನ್ನ ಮಂಗಳವಾರ ಗುಜರಾತ್ ಹೈಕೋರ್ಟ್ (Gujarat High Court) ಎತ್ತಿ ಹಿಡಿದಿದೆ.
ನ್ಯಾಯಮೂರ್ತಿಗಳಾದ ಎ.ವೈ. ಕೊಗ್ಜೆ ಹಾಗೂ ಸಮೀರ್ ಡೇವ್ ಅವರ ವಿಭಾಗೀಯ ಪೀಠವು 2022 ರ ವಿಶೇಷ ನ್ಯಾಯಾಲಯದ ತೀರ್ಪಿನ ವಿರುದ್ಧ ಅಪರಾಧಿಗಳು ಸಲ್ಲಿಸಿದ ಎಲ್ಲಾ ಮೇಲ್ಮನವಿಗಳನ್ನ ವಜಾಗೊಳಿಸಿದೆ. ಇದನ್ನೂ ಓದಿ: ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ – 38 ಮಂದಿಗೆ ಮರಣ ದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

2022 ರಲ್ಲಿ ತೀರ್ಪು ಪ್ರಕಟಿಸಿದ್ದ ವಿಶೇಷ ಕೋರ್ಟ್
ಫೆಬ್ರವರಿ 2022 ರಲ್ಲಿ, ಗೊತ್ತುಪಡಿಸಿದ ವಿಶೇಷ ನ್ಯಾಯಾಲಯವು (Speical Court) ಪ್ರಕರಣದ 38 ಅಪರಾಧಿಗಳಿಗೆ ಮರಣದಂಡನೆ ಮತ್ತು ಇತರ 11 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿತ್ತು. ನಂತರ ಅಪರಾಧಿಗಳು ಗುಜರಾತ್ ಹೈಕೋರ್ಟ್‌ನಲ್ಲಿ ತೀರ್ಪನ್ನು ಪ್ರಶ್ನಿಸಿದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇಂದು ಎಲ್ಲಾ ಅಪರಾಧಿಗಳಿಗೆ ವಿಧಿಸಿದ್ದ ಶಿಕ್ಷೆಯನ್ನು ಎತ್ತಿ ಹಿಡಿದಿದೆ.
ಗುಜರಾತ್‌ನ ಅತಿದೊಡ್ಡ ನಗರವನ್ನ ನಡುಗಿಸಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣ, 18 ವರ್ಷಗಳ ನಂತರ ಇತ್ಯರ್ಥ ಕಂಡಿದೆ. ಇದನ್ನೂ ಓದಿ: ಮೋದಿಯನ್ನು ಹತ್ಯೆ ಮಾಡಲೆಂದೇ ಉಗ್ರರಿಂದ ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟ!

70 ನಿಮಿಷಗಳ ಅಂತರದಲ್ಲಿ 21 ಸ್ಫೋಟಗಳು
ಜುಲೈ 26, 2008 ರಂದು ಅಹಮದಾಬಾದ್‍ನಲ್ಲಿರುವ ಸಿವಿಲ್ ಆಸ್ಪತ್ರೆ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಎಲ್‍ಜಿ ಆಸ್ಪತ್ರೆ, ಬಸ್‍ಗಳು, ನಿಲ್ಲಿಸಿದ ಬೈಸಿಕಲ್‍ಗಳು, ಕಾರುಗಳು ಮತ್ತು ಇತರ ಸ್ಥಳಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ 21 ಬಾಂಬ್‍ಗಳನ್ನು ಸ್ಫೋಟಿಸಲಾಗಿತ್ತು. 70 ನಿಮಿಷಗಳ ಅಂತರದಲ್ಲಿ ಸುಮಾರು 21 ಬಾಂಬ್‌ಗಳನ್ನ ಸ್ಫೋಟಿಸಲಾಗಿತ್ತು. ಇದನ್ನೂ ಓದಿ: ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಅರೆಸ್ಟ್
ಈ ಘಟನೆಯಲ್ಲಿ 56 ಜನರು ಸಾವನ್ನಪ್ಪಿದರು. ಸುಮಾರು 200 ಮಂದಿ ಗಾಯಗೊಂಡಿದ್ದರು. ಕೆಲವು ಮಾಧ್ಯಮ ಸಂಸ್ಥೆಗಳಿಗೆ ಕಳುಹಿಸಲಾದ ಇಮೇಲ್‍ಗಳಲ್ಲಿ, ಇಂಡಿಯನ್ ಮುಜಾಹಿದೀನ್ (Indian Mujahideen) ಸಂಘಟನೆಯು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು.
