– 2026ರ ತಮಿಳುನಾಡು ಚುನಾವಣೆಗೆ ಪಿಚ್ ತಯಾರಿ
ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Polls) ಬಿಜೆಪಿ ಮತ್ತು ಎಐಎಡಿಎಂಕೆ (AIADMK-BJP Alliance) ಒಟ್ಟಾಗಿ ಹೋರಾಡಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಆ ಮೂಲಕ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ ಎಂದು ಘೋಷಿಸಿದ್ದಾರೆ.
ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದ ಅಮಿತ್ ಶಾ (Amit Shah), ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಚುನಾವಣೆ ಎದುರಿಸಲಿದೆ ಎಂದು ತಿಳಿಸಿದ್ದಾರೆ. ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಕೂಡ ಅಮಿತ್ ಶಾ ಮತ್ತು ಪಳನಿಸ್ವಾಮಿ ಅವರೊಂದಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವಿರೋಧ ಆಯ್ಕೆ
ಎಐಎಡಿಎಂಕೆ, ಬಿಜೆಪಿ ಮತ್ತು ಎಲ್ಲಾ ಮೈತ್ರಿ ಪಕ್ಷಗಳು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಎನ್‌ಡಿಎಯಾಗಿ ಸ್ಪರ್ಧಿಸಲಿವೆ ಎಂದು ಅಮಿತ್ ಶಾ ಹೇಳಿದ್ದಾರೆ.
ಎಐಎಡಿಎಂಕೆಯಿಂದ ಡಿಮ್ಯಾಂಡೂ ಇಲ್ಲ, ಕಂಡೀಷನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 2026ರಲ್ಲಿ ತಮಿಳುನಾಡಿನಲ್ಲಿ ಎನ್‌ಡಿಎಗೆ ಬಹುಮತ ಸಿಗಲಿದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. 2026ರ ತಮಿಳುನಾಡು ಚುನಾವಣೆಗೆ ಪಿಚ್ ತಯಾರಾಗಿದ್ದು, ಅಣ್ಣಾಮಲೈಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕ ನೈನಾರ್ ನಾಗೇಂದ್ರನ್ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್