ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ (Karnataka Chief Minister) ಆಯ್ಕೆಯ ಚೆಂಡು ಈಗ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ನಿರ್ಧಾರ ಬಿಡಲಾಗಿದೆ.
ಭರ್ಜರಿ ಬಹುಮತ ಪಡೆದ ಅಧಿಕಾರಕ್ಕೆ ಏರಿದ ಹಿನ್ನೆಲೆಯಲ್ಲಿ ಇಂದು ನಗರದ ಖಾಸಗಿ ಹೋಟೆಲಿನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ (CLP Meeting) ನಡೆಯಿತು. ಇದನ್ನೂ ಓದಿ: 42 ಕಡೆ 5 ಸಾವಿರಕ್ಕೂ ಕಡಿಮೆ ಅಂತರದ ಗೆಲುವು – 2023, 2018ರಲ್ಲಿ ಯಾರಿಗೆ ಎಷ್ಟು ಮತ?
Advertisement
Advertisement
ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಅಭಿನಂದನೆ ಸಲ್ಲಿಸಿ ಹೈಕಮಾಂಡ್ ನಿರ್ಧಾರಕ್ಕೆ ಸಿಎಂ ಆಯ್ಕೆಯನ್ನು ಶಾಸಕರು ಬಿಟ್ಟಿದ್ದಾರೆ. ಒಂದು ಒಂದು ಸಾಲಿನ ನಿರ್ಣಯ ಅಂಗೀಕರಿಸಿದ ಸಭೆ ಎಐಸಿಸಿ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲಾಗಿದೆ. ಇದನ್ನೂ ಓದಿ: ಸಿಎಂ ಕುರ್ಚಿ ಫೈಟ್; 50-50 ಪ್ಲಾನ್ ಡಿಕೆಶಿ ಮುಂದಿಡ್ತಾರಾ ಸಿದ್ದು?
Advertisement
ಸಭೆ ನಡೆಯುವ ಮೊದಲೇ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗರು ಹೋಟೆಲ್ ಹೊರಗಡೆ ಆಗಮಿಸಿ ನಾಯಕರ ಪರ ಘೋಷಣೆ ಕೂಗಿದ್ದಾರೆ. ಇಬ್ಬರು ನಾಯಕರ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಸೇರಿದ ಹಿನ್ನೆಲೆಯಲ್ಲಿ ಭದ್ರತೆಗೆ ನೂರಕ್ಕೂ ಅಧಿಕ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.