ಬೆಂಗಳೂರು: ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕಸರತ್ತಿಗೆ ಬ್ರೇಕ್ ಹಾಕುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಗೆಲುವಿನ ನಗೆ ಬೀರಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ಎಐಸಿಸಿ ಮಹತ್ವದ ಹೆಜ್ಜೆ ಇಟ್ಟಿದ್ದು, ಕೆಪಿಸಿಸಿ ಪುನಾರಚನೆಗೆ ತೀರ್ಮಾನ ಕೈಗೊಂಡಿದೆ. ಆದರೆ ಅಧ್ಯಕ್ಷ ಮತ್ತು ಕಾರ್ಯಧ್ಯಕ್ಷ ಸ್ಥಾನವನ್ನು ಹಾಗೆ ಉಳಿಸಿಕೊಂಡು, ಕೆಪಿಸಿಸಿಯ ಕಾರ್ಯಕಾರಿ ಸಮಿತಿ, ಪ್ರಚಾರ ಸಮಿತಿ, ಪದಾಧಿಕಾರಿಗಳು, ಸಮನ್ವಯ ಸಮಿತಿಗಳ ವಿಸರ್ಜನೆಗೆ ನಿರ್ಧರಿಸಿದೆ.
Advertisement
Advertisement
ಈ ಮೂಲಕ ದಿನೇಶ್ ಗುಂಡೂರಾವ್ ಹಾಗೂ ಈಶ್ವರ್ ಖಂಡ್ರೆ ಅವರನ್ನು ಹೊರತು ಪಡಿಸಿದಂತೆ ಉಳಿದೆಲ್ಲ ಸಮಿತಿಗಳ ನಾಯಕರು ಬದಲಾಗಲಿದ್ದಾರೆ. ಎಐಸಿಸಿ ಮಹತ್ವದ ಆದೇಶದಿಂದ 170ಕ್ಕೂ ಹೆಚ್ಚು ಮುಖಂಡರ ಸ್ಥಾನಕ್ಕೆ ಕೊಕ್ ನೀಡಲು ಭಾರೀ ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ.
Advertisement
ಕಾಂಗ್ರೆಸ್ ಅಧ್ಯಕ್ಷಗಿರಿ ಮೇಲೆ ಕಣ್ಣಿಟ್ಟಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರ ಕನಸು ಭಗ್ನವಾಗಿದೆ. ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಧ್ಯಕ್ಷ ಸ್ಥಾನವನ್ನು ತಮ್ಮ ಬಳಿಯೇ ಉಳಿಸಿಕೊಂಡ ಸಿದ್ದರಾಮಯ್ಯ ಅವರ ಬಣಕ್ಕೆ ಜಯ ಸಿಕ್ಕಂತಾಗಿದ್ದು, ಡಿಸಿಎಂ ಪರಮೇಶ್ವರ್ ಅವರ ಬಣಕ್ಕೆ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕುಳಿತು ಭರ್ಜರಿ ಆಟ ಆಡಿದರಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
Advertisement
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]