ಕೆ.ಎನ್.ರಾಜಣ್ಣ, ಶಾಮನೂರು ಶಿವಶಂಕರಪ್ಪಗೆ ಕೈ ಹೈಕಮಾಂಡ್ ವಾರ್ನಿಂಗ್

Public TV
1 Min Read
SHAMANOOR KN RAJANNA

ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ (KN Rajanna) ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪಗೆ (Shamanur Shivashankarappa) ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (K.C Venugopal) ಇಬ್ಬರಿಗೂ ಶಿಸ್ತು ಮೀರಿ ಮಾತನಾಡದಂತೆ ದೂರವಾಣಿ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಬಿಜೆಪಿ ಸಂಸದ ರಾಘವೇಂದ್ರ ಗೆಲ್ಲಿಸುವಂತೆ ಶಾಮನೂರು ಶಿವಶಂಕರಪ್ಪ ಅವರು ಕರೆ ನೀಡಿದ್ದರು. ಸಚಿವ ಕೆ.ಎನ್.ರಾಜಣ್ಣ ಅವರು, ನಾವು ಕಾಂಗ್ರೆಸ್ ಹೈಕಮಾಂಡ್ ಗುಲಾಮರಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೂ ಕರೆ ಮಾಡಿರುವ ಕೆ.ಸಿ ವೇಣುಗೋಪಾಲ್ ಅವರು ನೋಟಿಸ್ ನೀಡುವ ಎಚ್ಚರಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆ (Loksabha Election) ಇದೆ ಎಂಬ ಕಾರಣಕ್ಕೆ ಸದ್ಯಕ್ಕೆ ನೋಟಿಸ್ ನೀಡುತ್ತಿಲ್ಲ. ಹೀಗೆ ವಿವಾದಾತ್ಮಕವಾಗಿ ಮಾತನಾಡುವುದು ಮುಂದುವರಿದರೆ ನೋಟಿಸ್ ನೀಡಬೇಕಾಗುತ್ತದೆ. ಅಲ್ಲದೆ ಶಿಸ್ತುಬದ್ಧ ಕ್ರಮ ಎದುರಿಸಬೇಕಾಗುತ್ತದೆ ಎಂದೂ ವಾರ್ನ್ ಮಾಡಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದರೆ ಕಾಂಗ್ರೆಸ್ ಸರ್ಕಾರ ತೆಗೆಯುವ ಗ್ಯಾರಂಟಿ: ಬೊಮ್ಮಾಯಿ

Share This Article