ನವದೆಹಲಿ: ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಸಂಸದೀಯ ಸವಲತ್ತುಗಳನ್ನೂ ಕಳೆದುಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ 3 ವರ್ಷ ಸಾಮಾನ್ಯ ಪಾಸ್‌ಪೋರ್ಟ್ (Ordinary ParssPort) ಬಳಸಲು ದೆಹಲಿ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.
ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್‌ಗಾಂಧಿ ತಮ್ಮ ಪಾಸ್‌ಪೋರ್ಸ್ ಅನ್ನು ಒಪ್ಪಿಸಿದ್ದರು. ನಂತರ ಗಾಂಧಿ ಅವರು ನಿರಾಕ್ಷೇಪಣಾ ಪ್ರಮಾಣಪತ್ರಕ್ಕಾಗಿ (NOC) ಕೋರ್ಟ್ ಸಂಪರ್ಕಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದಾಗ ಅರ್ಜಿಯನ್ನು ಭಾಗಶಃ ಅನುಮತಿಸುವುದಾಗಿ ಕೋರ್ಟ್ ಹೇಳಿದೆ. ಆದ್ರೆ 10 ವರ್ಷಗಳು ಇರುವುದಿಲ್ಲ, ಕೇವಲ 3 ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್ ಬಳಸಬಹುದಾಗಿ ತಿಳಿಸಿದೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಿತ ಹೇಳಿಕೆ – ಸತ್ಯವೇ ನನ್ನ ದೇವರು ಎಂದ ರಾಹುಲ್
Advertisement
Advertisement
ರಾಹುಲ್ ಗಾಂಧಿ ಅವರು ಪಾಸ್ ಪೋರ್ಟ್ ಹೊಂದಲು ನ್ಯಾಯಾಲಯದ ಅನುಮತಿ ಬೇಕಿತ್ತು. ಏಕೆಂದರೆ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣದ (National Herald Case) ಆರೋಪಿಯಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಹಾಗೂ ಹಣಕಾಸು ದುರ್ಬಳಕೆ ಆರೋಪಗಳು ಅವರ ಮೇಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್- ರಾಹುಲ್, ಸೋನಿಯಾ ಅರ್ಜಿ ವಜಾ
Advertisement
Advertisement
ರಾಹುಲ್ ಗಾಂಧಿ ಅವರು ಪಾಸ್ ಪೋರ್ಟ್ ಹೊಂದಲು ನ್ಯಾಯಾಲಯದಿಂದ ನಿರಪೇಕ್ಷಣಾ ಪತ್ರ ಕೋರಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಕಳೆದ ಬುಧವಾರ ಸೂಚಿಸಿತ್ತು. ಶುಕ್ರವಾರದ ಒಳಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಸ್ವಾಮಿ ಅವರಿಗೆ ನ್ಯಾಯಾಲಯ ಡೆಡ್ ಲೈನ್ ನೀಡಿತ್ತು. ಶುಕ್ರವಾರದ ವಿಚಾರಣೆ ವೇಳೆ ಮೆಟ್ರೋಪಾಲಿಟನ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಮೂರ್ತಿ ವೈಭವ್ ಮೆಹ್ತಾ ಅವರು ರಾಹುಲ್ ಗಾಂಧಿ ಅವರಿಗೆ ಪ್ರಯಾಣ ಮಾಡುವ ಮೂಲಭೂತ ಹಕ್ಕು ಇದೆ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ನಾವು ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಮೂರ್ತಿಗಳು ವಿದೇಶಿ ಪ್ರವಾಸಕ್ಕೆ ಅನುಮತಿ ನೀಡಿದ್ದಾರೆ.
2015ರ ಡಿಸೆಂಬರ್‌ನಲ್ಲಿ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡುವಾಗ ನ್ಯಾಯಾಲಯವು ಅವರ ಪ್ರಯಾಣದ ಮೇಲೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಬೇಕೆನ್ನುವ ಬಿಜೆಪಿ ನಾಯಕನ ಮನವಿಯನ್ನು ನ್ಯಾಯಾಲಯ ತಿಸ್ಕರಿಸಿದೆ.
2019ರ ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರು ಭಾಷಣ ಮಾಡುತ್ತಾ ʻಮೋದಿʼ ಉಪನಾಮ ಬಳಸಿ ಟೀಕಿಸಿದ್ದರು. ಈ ಹಿನ್ನೆಲೆ ಮಾನನಷ್ಟ ಮೊಕದ್ದಮೆಯಲ್ಲಿ 2 ವರ್ಷ ಶಿಕ್ಷೆಗೆ ಗುರಿಯಾಗಿ ಸಂಸತ್ ಸದಸ್ಯತ್ವ ಸ್ಥಾನವನ್ನೂ ಕಳೆದುಕೊಂಡರು. ಇದನ್ನೂ ಓದಿ: ರಾಹುಲ್‌ಗೆ ಬಿಗ್ ರಿಲೀಫ್ – 30 ದಿನಗಳ ಜಾಮೀನು ಮಂಜೂರು’
ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?
2013ರಲ್ಲಿ ಜನವರಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಪಟಿಯಾಲಾ ಹೌಸ್ ಕೋರ್ಟ್‍ನಲ್ಲಿ ಅಂದಿನ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಅವರ ಕಂಪೆನಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸೇರಿದಂತೆ ಸೋನಿಯಾ ಗಾಂಧಿ ಸಂಬಂಧಿತ ವ್ಯಕ್ತಿಗಳ ವಿರುದ್ಧ ದೂರು ಸಲ್ಲಿಸಿದ್ದರು. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಿತ ಹೇಳಿಕೆ – ಸತ್ಯವೇ ನನ್ನ ದೇವರು ಎಂದ ರಾಹುಲ್
ಸುಬ್ರಮಣಿಯನ್ ಸ್ವಾಮಿ ಆರೋಪವೇನು?
ಅಸೋಸಿಯೇಟೆಡ್ ಜರ್ನಲ್ಸ್(AGL) ಸಂಸ್ಥೆಯನ್ನು ಜವಹಾರ್ ಲಾಲ್ ನೆಹರು ಅವರು 1937ರ ನವೆಂಬರ್ 20 ರಂದು ಸ್ಥಾಪಿಸಿದ್ದರು. 5 ಸಾವಿರ ಸ್ವಾತಂತ್ರ್ಯ ಹೋರಾಟಗಾರರ ಸಹಕಾರದಿಂದ ಈ ಸಾರ್ವಜನಿಕ ಕಂಪನಿ ಸ್ಥಾಪನೆಯಾಗಿತ್ತು. ಎಜೆಎಲ್ ಸಂಸ್ಥೆಯ ಸ್ಥಾಪನೆ ಬಳಿಕ ಅಂದಿನ ಪ್ರಧಾನಿ ನೆಹರೂ ಅವರು, ನವದೆಹಲಿ, ಲಕ್ನೋ, ಭೋಪಾಲ್, ಮುಂಬೈ, ಇಂದೋರ್ ನಗರದಲ್ಲಿ ಸರ್ಕಾರದ ವತಿಯಿಂದ ಜಮೀನು ಮಂಜೂರು ಮಾಡಿದ್ದರು. ಅಲ್ಲದೇ ಅವರ ಅವಧಿಯಲ್ಲಿ ಸಂಸ್ಥೆಗೆ ಅಪಾರ ಪ್ರಮಾಣದ ದೇಣಿಗೆ ಹರಿದುಬಂದಿತ್ತು. ಎಜೆ ಸಂಸ್ಥೆ ಅಂದು ಉರ್ದು ಆವೃತ್ತಿಯ ‘ಕ್ವಾಮಿ ಆವಾಜ್’ ಹಾಗೂ ಇಂಗ್ಲಿಷ್ ಆವೃತ್ತಿಯ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಗಳನ್ನು ಪ್ರಕಟಿಸುತಿತ್ತು.
ಎಜೆಎಲ್ ಸಂಸ್ಥೆಗೆ ಕಾಂಗ್ರೆಸ್ ಪಕ್ಷ ಸಂಗ್ರಹಿಸಿದ್ದ ನಿಧಿಯಿಂದ 90 ಕೋಟಿ ರೂ. ಹಣವನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗಿತ್ತು. 2011ರಲ್ಲಿ ಎಜೆಎಲ್ ಸಂಸ್ಥೆಯ ಅಧ್ಯಕ್ಷರಾಗಿದ್ದ ಮೋತಿ ಲಾಲ್ ವೋರಾ ತಮ್ಮ ಸಂಸ್ಥೆ ಸಾಲ ಮರುಪಾವತಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಸಂಸ್ಥೆ ಹಾಗೂ ಅದರ ಆಸ್ತಿಗಳನ್ನು ರಾಹುಲ್ ಗಾಂಧಿ ಕುಟುಂಬ ಒಡೆತನದಲ್ಲಿದ್ದ ಯಂಗ್ ಇಂಡಿಯನ್ ಸಂಸ್ಥೆಗೆ ವರ್ಗಾಯಿಸಲು ಸಮ್ಮತಿಸಿದ್ದರು.