ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು ನವದೆಹಲಿಯಲ್ಲಿ ನಡೆಯಲಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ಮೊದಲ ಬಾರಿ ಸಂಸತ್ ಭವನದಲ್ಲಿ ಸಭೆ ನಡೆಯುತ್ತಿದೆ.
ಸಭೆಯಲ್ಲಿ ಯುಪಿಎ ಒಕ್ಕೂಟದ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಗುಲಾಂನಬೀ ಅಜಾದ್. ರಾಜ್ಯದಿಂದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಸ್ತುವಾರಿ ಕೆ.ವೇಣುಗೋಪಾಲ್ ಸೇರಿದಂತೆ ಒಟ್ಟು 23 ಜನ ಸದಸ್ಯರು ಭಾಗಿಯಾಗಲಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ನಡೆಯುತ್ತಿರುವ ಈ ಸಭೆ ಮಹತ್ವ ಪಡೆದುಕೊಂಡಿದೆ.
Advertisement
ಲೋಕಸಭೆ ಚುನಾವಣೆ ದೃಷ್ಟಿಯಿಂದ ಪಕ್ಷದ ಬಲಿಷ್ಠಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಯೂಥ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್, ಸೇವಾದಳ ಮೂಲಕ ಕಾಂಗ್ರೆಸ್ ಮತ್ತೆ ಶಕ್ತಿಯುತವಾಗಿ ಮಾಡಲು ಕಾರ್ಯತಂತ್ರಗಳು ರೂಪಗೊಳ್ಳಲಿದೆ. ಲೋಕಸಭೆ ಚುನಾವಣೆ ಹೊತ್ತಲೇ ಬರುತ್ತಿರುವ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತಿಸ್ ಗಡ್ ಚುನಾವಣೆ ಸಿದ್ಧತೆ ಬಗ್ಗೆ ಕ್ರಿಯಾ ಯೋಜನೆ ತಯಾರಿಸಲಿದ್ದು, ಪ್ರಾದೇಶಿಕ ಪಕ್ಷಗಳನ್ನು ವಿಶ್ವಾಸಕ್ಕೆ ತೆಗದುಕೊಂಡು ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
Advertisement