– ಟಾರ್ಗೆಟ್ ರೀಚ್ ಆದಬಳಿಕ ಸಚಿವ ಸ್ಥಾನ ಕೇಳಿ- ರಾಹುಲ್ ಗಾಂಧಿ ಕಿಡಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರ ನಿಷ್ಕಾಳಜಿಯಿಂದಾಗಿ ರಾಹುಲ್ ಗಾಂಧಿ ಕನಸಿನ ಶಕ್ತಿ ಯೋಜನೆ ವಿಫಲವಾಗಿದೆ. ವಿಫಲವಾದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿರುವ ಹಾಗೂ ಅಧಿಕಾರ ಪಡೆದು ಪಕ್ಷದ ಸಂಘಟನೆ ಮರೆತಿರುವ ರಾಜ್ಯ ನಾಯಕರ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದಾರೆ.
ಚಿಕ್ಕ ರಾಜ್ಯಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಜನರು ಸದಸ್ಯತ್ವ ಪಡೆದಿದ್ದಾರೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಲ್ಲಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಕ್ಷದ ಸದಸ್ಯತ್ವ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡದ್ದಕ್ಕೆ ಎಐಸಿಸಿ ರಾಜ್ಯ ನಾಯಕರನ್ನು ತರಾಟೆಗೆ ತೆಗದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ಏನಿದು ಶಕ್ತಿ ಯೋಜನೆ?:
ಲೋಕಸಭಾ ಚುನಾವಣೆ ಹಿನ್ನೆಲೆ ವಾಟ್ಸಾಪ್ ಮೂಲಕ ಪಕ್ಷದ ಸದಸ್ಯತ್ವ ನೋಂದಣಿ ಯೋಜನೆಯನ್ನು ರಾಹುಲ್ ಗಾಂಧಿ ಪರಿಚಯಿಸಿದ್ದರು. ಈ ಮೂಲಕ ಹೆಚ್ಚು ಸದಸ್ಯರು, ಕಾರ್ಯಕರ್ತರನ್ನು ಪಕ್ಷಕ್ಕೆ ನೋಂದಣಿ ಮತ್ತು ಸೇರ್ಪಡೆ ಮಾಡಿಕೊಳ್ಳುವ ಗುರಿಯನ್ನು ಹೊಂದಲಾಗಿತ್ತು.
Advertisement
ಈ ಕುರಿತು ಪ್ರಚಾರ ಮಾಡಿ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಜವಾಬ್ದಾರಿಯನ್ನು ಶಾಸಕರು, ಸಚಿವರು ಹಾಗೂ ನಾಯಕರಿಗೆ ನೀಡಲಾಗಿತ್ತು. ಈ ನೋಂದಣಿ ಅಭಿಯಾನ 2018ರ ನವಂಬರ್ ಅಂತ್ಯಕ್ಕೆ ಮುಗಿಯಬೇಕಿತ್ತು. ಆದರೆ ಯೋಜನೆ ವಿಫಲವಾಗಿದ್ದಕ್ಕೆ ರಾಹುಲ್ ಗಾಂಧಿ ಅವರು ರಾಜ್ಯದ ನಾಯಕರಿಗೆ ಫುಲ್ ಕ್ಲಾಸ್ ತೆಗೆದುಕೊಂಡು ಡಿಸೆಂಬರ್ 15ರವರೆಗೆ ಅಭಿಯಾನವನ್ನು ವಿಸ್ತರಿಸಿದ್ದಾರೆ ಎನ್ನಲಾಗಿದೆ.
Advertisement
ಹೈಕಮಾಂಡ್‍ನ ಹೊಸ ವರಸೆ ಕಂಡು ಶಾಸಕರು, ಸಚಿವ ಸ್ಥಾನ ಆಕಾಂಕ್ಷಿಗಳು ಈಗ ಕಂಗಲಾಗಿದ್ದಾರೆ. ಎಲ್ಲವೂ ಮುಗಿಯಿತು ಎನ್ನುವಾಗ ಪಕ್ಷ ಸಂಘಟನೆಯ ಹೊಸ ಜವಬ್ದಾರಿ ಎದುರಾಗಿದೆ. ಸಚಿವ ಸ್ಥಾನ ಕೇಳಲು ಸದಸ್ಯತ್ವ ನೋಂದಣಿ ಅಭಿಯಾನದ ಫಲಿತಾಂಶ ತೋರಿಸಬೇಕಾದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಕನಿಷ್ಟ 10 ಲಕ್ಷ ಜನರು ಸದಸ್ಯತ್ವ ಪಡೆಯಬೇಕು ಎಂದು ಎಐಸಿಸಿ ಖಡಕ್ ಆದೇಶ ನೀಡಿದೆ.
ಯಾವ ರಾಜ್ಯದಲ್ಲಿ ಎಷ್ಟು ನೋಂದಣಿ?:
ಕರ್ನಾಟಕದಲ್ಲಿ ಕಳೆದ ಎರಡು ತಿಂಗಳಿನಿಂದ ಕೇವಲ 3 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ. ರಾಜಸ್ಥಾನದಲ್ಲಿ 7 ಲಕ್ಷ ಜನ, ಮಧ್ಯ ಪ್ರದೇಶದಲ್ಲಿ 6 ಲಕ್ಷ ಮಂದಿ, ಚಿಕ್ಕ ರಾಜ್ಯವಾಗಿರುವ ಛತ್ತೀಸಗಢದಲ್ಲಿ 4.5 ಲಕ್ಷ ಜನ ಸದಸ್ಯತ್ವ ಪಡೆದಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv