ಮಂಡ್ಯ: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಮಂಡ್ಯದಲ್ಲಿ ತಮ್ಮ ಪ್ರವಾಸ ಕೈಗೊಳ್ಳಲಿದ್ದಾರೆ.
ವಿಶೇಷ ಅಂದ್ರೆ ರಾಹುಲ್ ಇಂದು ಪ್ರವಾಸ ಮಾಡುತ್ತಿರುವ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಲ್ಲ. ಶನಿವಾರವಷ್ಟೇ ಹಳೆ ಮೈಸೂರು ಭಾಗದ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ, ಈ ಭಾಗದ ಪ್ರಬಲ ಮಠಗಳಿಗೆ ಭೇಟಿ ನೀಡದೇ ಅಂತರ ಕಾಯ್ದುಕೊಂಡಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ರಾಹುಲ್‍ಗೆ ಎನ್‍ಸಿಸಿ ಟ್ರೈನಿಂಗ್ ಬಗ್ಗೆ ಗೊತ್ತೇ ಇಲ್ಲ-ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆದ ರಾಗಾ
Advertisement
Advertisement
ಮೈಸೂರಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ರು. ಆದ್ರೆ ಲಿಂಗಾಯತ ಸಮುದಾಯದ ಸುತ್ತೂರು ಮಠದತ್ತ ಸುಳಿಯಲಿಲ್ಲ.
Advertisement
ಇಂದು ಜೆಡಿಎಸ್ ಭದ್ರಕೋಟೆ ಮಂಡ್ಯಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ, ಒಕ್ಕಲಿಗರ ಆದಿಚುಂಚನಗಿರಿ ಮಠಕ್ಕೂ ಭೇಟಿ ನೀಡದಿರಲು ನಿರ್ಧರಿಸಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಕೆಆರ್ ಪೇಟೆಗೆ ಆಗಮಿಸಲಿರುವ ರಾಹುಲ್, ಬಸ್ ನಿಲ್ದಾಣದ ಬಳಿ ಚಿಕ್ಕ ವೇದಿಕೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲಿ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಗೆ ರಾಹುಲ್ ಗಾಂಧಿ ಹೀಗಂದ್ರು
Advertisement
ಕೆಆರ್ ಪೇಟೆಯಲ್ಲಿಯೇ ಮಧ್ಯಾಹ್ನದ ಊಟ ಮಾಡಲಿದ್ದಾರೆ. ನಂತರ ಬಸ್ ಮೂಲಕ ಪಾಂಡವಪುರ ಮತ್ತು ಶ್ರೀರಂಗಪಟ್ಟಣಕ್ಕೆ ತೆರಳಿ ರೈತರು, ಸಾರ್ವಜನಿಕರೊಂದಿಗೆ ಕಾರ್ನರ್ ಸಭೆ ನಡೆಸಲಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಬಂಡಾಯ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ರಾಹುಲ್ ಗಾಂಧಿಯವರನ್ನು ಸ್ವಾಗತಿಸಲಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ರಸ್ತೆ ಮಾರ್ಗವಾಗಿ ಮೈಸೂರು ತಲುಪಲಿದ್ದಾರೆ.