ನವದೆಹಲಿ: ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತು ಮುಂದುವರೆದಿದೆ. ಹೈಕಮಾಂಡ್‍ನೊಂದಿಗೆ ರಾಜ್ಯ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ರೂ ಅಂತಿಮ ತಿರ್ಮಾನಕ್ಕೆ ಬರುವಲ್ಲಿ ಸಫಲವಾಗಿಲ್ಲ.
ಸಚಿವ ಸ್ಥಾನ ಮತ್ತು ಖಾತೆ ಹಂಚಿಕೆ ವಿಚಾರವಾಗಿ ಶನಿವಾರ ಸಂಜೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ರಾಜ್ಯ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು. ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ರಾಜ್ಯ ಚುನಾವಣಾ ಉಸ್ತುವಾರಿ ಕೆ.ವೇಣುಗೋಪಾಲ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸಭೆಯಲ್ಲಿ ಭಾಗವಹಿಸಿದ್ದರು.
Advertisement
Advertisement
ಚರ್ಚೆ ವೇಳೆ ಕೆಲ ಜಿಲ್ಲೆಗಳಲ್ಲಿ ಸಚಿವ ಸ್ಥಾನ ಹಂಚಿಕೆ ಹಾಗೂ ಜಿಲ್ಲಾ ಉಸ್ತುವಾರಿ ನೀಡುವ ಬಗ್ಗೆ ಕೆಲ ಗೊಂದಲಗಳು ಸೃಷ್ಟಿಯಾಗಿದ್ದು, ಗೊಂದಲಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಚರ್ಚೆ ಮಾಡಲು ದೆಹಲಿಗೆ ಬರುವಂತೆ ರಾಹುಲ್ ಗಾಂಧಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಬುಲಾವ್ ನೀಡಿದ್ರು. ಆದರೆ ಸಿಎಂ ವಿಧಾನಸೌಧದಲ್ಲಿ ನಡೆಯಲಿರುವ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಹಿನ್ನೆಲೆ ದೆಹಲಿಗೆ ತೆರಳಿಲ್ಲ ಅಂತಾ ಮೂಲಗಳು ಸ್ವಷ್ಟಪಡಿಸಿವೆ.
Advertisement
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡಾ ಇಂದು ಮಧ್ಯಾಹ್ನದಿಂದ ಮೂರು ದಿನಗಳ ಕಾಲ ವಿದೇಶ ಪ್ರವಾಸಕ್ಕೆ ತೆರಳುತ್ತಿರುವ ಹಿನ್ನೆಲೆ ಸಂಪುಟ ಸರ್ಕಸ್ ಇನ್ನು ಮೂರು ದಿನ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಇರುವ ಕಾರಣ ರಾಹುಲ್ ಗಾಂಧಿಯೊಂದಿಗೆ ಇಂದು ಬೆಳಗ್ಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆಯೂ ಇದೆ ಎಂಬುದಾಗಿ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.