ನವದೆಹಲಿ: ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಭೇಟಿ ಆಗಲಿದ್ದಾರೆ.
ಈ ಹಿಂದೆ ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂ ಸೋನಿಯಾ ಗಾಂಧಿ ಭೇಟಿಯಾಗಿದ್ದರು. ಈಗ ಡಿ.ಕೆ.ಶಿವಕುಮಾರ್ ಅವರ ಭೇಟಿಗಾಗಿ ಜೈಲು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ ಹಿನ್ನಲೆಯಲ್ಲಿ ಜೈಲು ಅಧಿಕಾರಿಗಳು ನಾಳೆ ಬೆಳಗ್ಗೆ ಅನುಮತಿ ನೀಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಡಿಕೆಶಿ ತಾಯಿ, ಪತ್ನಿಗೆ ತಾತ್ಕಾಲಿಕ ರಿಲೀಫ್
Advertisement
Advertisement
ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ಸಂಬಂಧ ಗುರುವಾರ ಸುಮಾರು 3 ಗಂಟೆಗೂ ಅಧಿಕ ಕಾಲ ವಾದ-ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ, ಆದೇಶವನ್ನು ಶನಿವಾರ ಕಾಯ್ದಿರಿಸಿದ್ದರು. ಇತ್ತ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಬಾರದೆಂದು ಇಡಿ ಪರ ವಕೀಲರು ಹೊಸ ಹೊಸ ವಿಷಯಗಳನ್ನು ಕೋರ್ಟ್ ನಲ್ಲಿ ಪ್ರಸ್ತಾಪಿಸಿದ್ದರು. ಇದನ್ನೂ ಓದಿ: ಡಿಕೆಶಿ ಅನುಪಸ್ಥಿತಿಯಲ್ಲಿ ಮೊದಲ ಚುನಾವಣೆ- ಜೈಲಿನಲ್ಲಿದ್ದರೂ ಕಮ್ಮಿಯಾಗದ ಡಿಕೆ ಬ್ರದರ್ಸ್ ಹವಾ
Advertisement
ದೊಡ್ಡ ದೊಡ್ಡ ಬ್ಯಾಗ್‍ಗಳಲ್ಲಿ ಹೊತ್ತು ತಂದಿದ್ದ ದಾಖಲೆಗಳನ್ನು ಕೋರ್ಟ್ ಮುಂದೆ ಇಟ್ಟು, ಡಿಕೆ ಶಿವಕುಮಾರ್ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡೋದು ಬೇಡ ಎಂದು ಇಡಿ ಪರ ವಕೀಲರು ವಾದ ಮಂಡಿಸಿದ್ದರು. ಡಿಕೆ ಶಿವಕುಮಾರ್ ತಾಯಿ ಗೌರಮ್ಮ, ಪುತ್ರಿ ಐಶ್ವರ್ಯ ಹೆಸರಿನಲ್ಲಿ ನಡೆದಿರುವ ವ್ಯವಹಾರಗಳ ಮಾಹಿತಿಯನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಇದಕ್ಕೆ ಡಿಕೆಶಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಬೇಲ್ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಕೊನೆಗೆ ನ್ಯಾಯಮೂರ್ತಿಗಳು, ಶನಿವಾರ ಆದೇಶವನ್ನು ಕಾಯ್ದಿರಿಸಿದರು. ಆದರೆ ಶನಿವಾರ ಕೋರ್ಟ್ ರಜೆ ಇದ್ದಿದ್ದರಿಂದ ಸೋಮವಾರ ಆದೇಶ ಹೊರ ಬೀಳಲಿದೆ.