ನವದೆಹಲಿ: ಏಕಾಏಕಿ ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರೀಯ ಜನತಾ ದಳ (ಆರ್‍ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಇಂದು ಡಿಸ್ಚಾರ್ಜ್ ಆಗಿದ್ದಾರೆ.
73 ವರ್ಷದ ಲಾಲೂಗೆ ಸದ್ಯ ಚಿಕಿತ್ಸೆ ಮುಂದುವರಿದಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪುತ್ರ ತೇಜಸ್ವಿ ಯಾದವ್ ಮಾಹಿತಿ ನೀಡಿದ್ದಾರೆ.
Advertisement
Lalu Prasad Yadav Ji is undergoing treatment in AIIMS, Delhi. His creatinine level was 4.5 when he was in Ranchi. It increased to 5.1 when it was tested in Delhi. It reached 5.9 when tested again. So the infection is increasing: Tejashwi Yadav, RJD leader and son of Lalu Yadav pic.twitter.com/f1iMxN1vdX
— ANI (@ANI) March 23, 2022
Advertisement
ಮೇವು ಹಗರಣ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ರಾಂಚಿಯ ರಾಜೇಂದ್ರ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ (RIMS) ಲಾಲೂ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ಎರಡು ದಿನಗಳಿಂದ ಆರೋಗ್ಯ ಸ್ಥಿತಿ ಇನ್ನಷ್ಟು ಹದಗೆಟ್ಟ ಪರಿಣಾಮ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ದೆಹಲಿಯ ಏಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಎಮೆರ್ಜೆನ್ಸಿ ವಾರ್ಡ್ ನಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಇದನ್ನೂ ಓದಿ: 2ನೇ ಅವಧಿಗೆ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕಾರ
Advertisement
Jharkhand | After the Medical Board reviewed RJD leader Lalu Prasad Yadav's health condition, it was found that he has issues in his heart & kidney. He is being sent to AIIMS Delhi for better treatment. The jail officials will decide (the date): Kameshwar Prasad, RIMS Director pic.twitter.com/oHYH54TRYx
— ANI (@ANI) March 22, 2022
Advertisement
ರಾಂಚಿಯ ರಾಜೇಂದ್ರ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾಲೂ ಹೃದಯ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆ ಎದುರಿಸುತ್ತಿದ್ದು, ಅಲ್ಲದೇ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಹಾಗಾಗಿ ಅವರ ವಯಸ್ಸನ್ನು ಪರಿಗಣಿಸಿ, ಇನ್ನಷ್ಟು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆಯ ಮೇರೆಗೆ ನಾವು ಅವರನ್ನು ರಿಮ್ಸ್‍ನಿಂದ ದೆಹಲಿಗೆ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ ಎಂದು ರಿಮ್ಸ್ ನಿರ್ದೇಶಕ ಡಾ.ಕಾಮೇಶ್ವರ್ ಪ್ರಸಾದ್ ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದರು.