ನವದೆಹಲಿ: ಭಾರೀ ಗದ್ದಲದ ನಡುವೆ ದೆಹಲಿಯ ಏಮ್ಸ್ ಆಸ್ಪತ್ರೆ (AIIMS Hospital) ಪ್ರಾಣಪ್ರತಿಷ್ಠೆ ಹಿನ್ನೆಯೆಲ್ಲಿ ಸಿಬ್ಬಂದಿಗೆ ಘೋಷಿಸಿದ್ದ ಅರ್ಧದಿನ ರಜೆಯ ಆದೇಶವನ್ನು ಕೆಲವೇ ಗಂಟೆಗಳಲ್ಲಿ ಹಿಂಪಡೆದಿದೆ.
ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಮಧ್ಯಾಹ್ನ 2:30ರ ವರೆಗೆ ಆಸ್ಪತ್ರೆಗೆ ರಜೆ ಘೋಷಿಸಿ ಸುತ್ತೋಲೆ ಹೊರಡಿಸಿತ್ತು. ಆದ್ರೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆಡಳಿತ ಮಂಡಳಿ ರಜೆಯ ಆದೇಶವನ್ನು ವಾಪಸ್ ಪಡೆದುಕೊಂಡಿದೆ. ಅಲ್ಲದೇ ಹೊರ ರೋಗಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಅಯೋಧ್ಯೆಗೂ ಮುನ್ನ ರಾಮಸೇತು ನಿರ್ಮಿಸಿದ ಸ್ಥಳಕ್ಕೆ ಮೋದಿ ಭೇಟಿ – ವಿಶೇಷ ಪ್ರಾರ್ಥನೆ
Advertisement
ಏಮ್ಸ್ ಹೇಳಿದ್ದೇನು?
ಕೇಂದ್ರ ಸರ್ಕಾರ ನೌಕರರಿಗೆ ಅರ್ಧದಿನ ರಜೆ ಘೋಷಿಸಿದ್ದನ್ನು ಉಲ್ಲೇಖಿಸಿ ದೆಹಲಿಯ ಏಮ್ಸ್ ಆಸ್ಪತ್ರೆ ಅರ್ಧದಿನ ರಜೆ ಘೋಷಿಸಿತ್ತು. ಜನವರಿ 22ರಂದು ಮಧ್ಯಾಹ್ನ 2.30ರಿಂದ ದೆಹಲಿ ಏಮ್ಸ್ ಆಸ್ಪತ್ರೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಆದರೆ ಸೋಮವಾರ 2.30ರ ವರಗೆ ತುರ್ತು ಸೇವೆಗಳು ಮಾತ್ರ ಲಭ್ಯವಿರಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿತ್ತು. ಇದನ್ನೂ ಓದಿ: ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ನಿಲುವಿನಿಂದ ಅಸಮಾಧಾನ; ಗುಜರಾತ್‌ನ ‘ಕೈ’ ಶಾಸಕ ರಾಜೀನಾಮೆ
Advertisement
Advertisement
ಅಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ಭಕ್ತರು ಸಜ್ಜಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿಗಳೂ ಪವಿತ್ರ ಕಾರ್ಯಕ್ರಮವನ್ನ ವೀಕ್ಷಿಸಲು ಹಾಗೂ ಪೂಜೆ, ಭಜನೆಯಲ್ಲಿ ತೊಡಗಿಸಿಕೊಳ್ಳಲು ಅರ್ಧ ದಿನ ರಜೆ ಘೋಷಿಸಲಾಗಿದೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಸಿಬ್ಬಂದಿಗೆ ರಜೆ ನೀಡಲಾಗಿದೆ. ಒಪಿಡಿ ವಿಭಾಗ ಸೇರಿದಂತೆ ತುರ್ತು ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಏಮ್ಸ್ ಆಡಳಿತ ಮಂಡಳಿ ತಿಳಿಸಿತ್ತು. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ – ಜ.22ರಂದು ಅರ್ಧದಿನ ರಜೆ ಘೋಷಿಸಿದ AIIMS ಆಸ್ಪತ್ರೆ
Advertisement
ಈ ಬೆನ್ನಲ್ಲೇ ಸಾರ್ವಜನಿಕರು ಹಾಗೂ ಪ್ರತಿಪಕ್ಷಗಳಿಂದ ಭಾರೀ ಟೀಕೆ ಕೇಳಿಬಂದಿತ್ತು. ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಸಹ, ಏಮ್ಸ್ ಮರ್ಯಾದಾ ಪುರುಷೋತ್ತಮ ರಾಮನನ್ನು ಸ್ವಾಗತಿಸಲು ರಜೆ ತೆಗೆದುಕೊಳ್ಳುತ್ತಿದೆ. ಆದ್ರೆ ಆರೋಗ್ಯ ಸೇವೆಗಳಿಗೆ ಅಡ್ಡಿಯಾಗುವುದನ್ನು ಶ್ರೀರಾಮ ಒಪ್ಪುತ್ತಾನಾ? ಎಂದು ಪ್ರಶ್ನಿಸಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು. ಇದನ್ನೂ ಓದಿ: ರಾಮಲಲ್ಲಾ ವಿಗ್ರಹದ ಫೋಟೋ ವೈರಲ್ ಮಾಡಿದವ್ರ ವಿರುದ್ಧ ಕಠಿಣ ಕ್ರಮಕ್ಕೆ ಪ್ರಧಾನ ಅರ್ಚಕ ಒತ್ತಾಯ