ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಕಾರಿನ ಮೇಲೆ ಗುಂಡು ಹಾರಿಸಿದ ಘಟನೆ ಇಂದು ದೆಹಲಿ-ಮೀರತ್ ಇ-ವೇನಲ್ಲಿ ಛಜರ್ಸಿ ಟೋಲ್ ಬಳಿ ನಡೆದಿದೆ.
कुछ देर पहले छिजारसी टोल गेट पर मेरी गाड़ी पर गोलियाँ चलाई गयी। 4 राउंड फ़ायर हुए। 3-4 लोग थे, सब के सब भाग गए और हथियार वहीं छोड़ गए। मेरी गाड़ी पंक्चर हो गयी, लेकिन मैं दूसरी गाड़ी में बैठ कर वहाँ से निकल गया। हम सब महफ़ूज़ हैं। अलहमदु’लिलाह। pic.twitter.com/Q55qJbYRih
— Asaduddin Owaisi (@asadowaisi) February 3, 2022
Advertisement
ಉತ್ತರಪ್ರದೇಶದ ಮೀರತ್ ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿದೆ. ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಓರ್ವನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
Advertisement
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಓವೈಸಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ.
Advertisement
I was leaving for Delhi after a poll event in Kithaur, Meerut (UP). 3-4 rounds of bullets were fired upon my vehicle by 2 people near Chhajarsi toll plaza; they were a total of 3-4 people. Tyres of my vehicle (in pic) punctured, I left on another vehicle: Asaduddin Owaisi to ANI pic.twitter.com/ksV6OWb57h
— ANI (@ANI) February 3, 2022
ನಾನು ಮೀರತ್ ನಿಂದ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಟೋಲ್ ಬಳಿ ಇಬ್ಬರು ದುಷ್ಕರ್ಮಿಗಳು ನನ್ನ ವಾಹನದ ಮೇಲೆ 4 ಸುತ್ತು ಗುಂಡು ಹಾರಿಸಿದ್ದಾರೆ. ಇವರ ಜೊತೆ ಇನ್ನೂ 3-4 ಮಂದಿ ಇದ್ದರು. ಗುಂಡು ಹಾರಿಸಿದ ಪರಿಣಾಮ ನನ್ನ ವಾಹನ ಪಂಕ್ಚರ್ ಆಯಿತು. ಹೀಗಾಗಿ ನಾನು ಬೇರೆ ವಾಹನದಲ್ಲಿ ಅಲ್ಲಿಂದ ತೆರಳಿದೆ ಎಂದು ಓವೈಸಿ ತಮ್ಮ ಟ್ವೀಟ್ ನಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಚೀನಾ ಒಲಿಂಪಿಕ್ಸ್‌ಗೆ ಭಾರತ ಬಹಿಷ್ಕಾರ – ದಿಟ್ಟ ನಿರ್ಧಾರ ತೆಗೆದುಕೊಂಡ ಭಾರತೀಯ ವಿದೇಶಾಂಗ ಇಲಾಖೆ
AIMIM chief Asaduddin Owaisi says that 3-4 rounds of bullets were fired upon his vehicle near Chhajarsi toll plaza while he was heading to Delhi after an election-related event in Kithaur, Meerut (in Uttar Pradesh).
Visual from the spot. pic.twitter.com/WXSQS88bMA
— ANI (@ANI) February 3, 2022
ಫೋಟೋ ಸಮೇತ ಓವೈಸಿ ಟ್ವೀಟ್ ಮಾಡಿದ್ದು, ಫೋಟೋದಲ್ಲಿ ಓವೈಸಿ ಇದ್ದ ಕಾರಿಗೆ ಗುಂಡು ತಾಗಿರುವುದನ್ನು ಹಾಗೂ ಟೈಯರ್ ಗಳು ಪಂಕ್ಚರ್ ಆಗಿರುವುದನ್ನು ಕಾಣಬಹುದಾಗಿದೆ. ಘಟನೆ ನಡೆದ ಬಳಿಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.