ಹೈದರಾಬಾದ್: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖಂಡನನ್ನು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹೈದರಾಬಾದ್‌ನಲ್ಲಿ (Hyderabad) ಭಾನುವಾರ ತಡರಾತ್ರಿ ನಡೆದಿದೆ.
ಮೃತರನ್ನುAIMIM ಪ್ರದೇಶ ಅಧ್ಯಕ್ಷ ಮೆಹಬೂಬ್ ಅಲಿ ಎಂದು ಗುರುತಿಸಲಾಗಿದೆ. ವಟ್ಟೆಪಲ್ಲಿಯ ಗುಂಟಲ್ ಶಾ ಬಾಬಾ ದರ್ಗಾ ಸಮೀಪ ಭಾನುವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: KPSC ನೇಮಕಾತಿ ಹಗರಣ; ಶಾಂತ ಹೊಸಮನಿ ವಿರುದ್ಧ ಲುಕೌಟ್ ನೋಟಿಸ್
ಸುಮಾರು 5ರಿಂದ 6 ಮಂದಿ ವ್ಯಕ್ತಿಗಳ ಗುಂಪು ಮೆಹಬೂಬ್ ಅಲಿ ಮೇಲೆ ಏಕಾಏಕಿ ದಾಳಿ ನಡೆಸಿದೆ. ಚಾಕುವಿನಿಂದ ಇರಿತಕ್ಕೊಳಗಾದ ಅಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ – ಡ್ರೈವರ್, ಕಂಡಕ್ಟರ್ ಬಂಧನ
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಗುಂಪಾಗಿ ಸ್ಥಳಕ್ಕೆ ಆಗಮಿಸಿ ಅಲಿ ಮೇಲೆ ದಾಳಿ ನಡೆಸಿ ಚಾಕುವಿನಿಂದ ಇರಿದಿದ್ದಾರೆ. ಆದರೆ ಹತ್ಯೆಯ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪ್ರಕರಣದ ತನಿಖೆಗಾಗಿ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ದಾಳಿಕೋರರನ್ನು ಪತ್ತೆಹಚ್ಚಿ ಬಂಧಿಸಲು ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಇದನ್ನೂ ಓದಿ: ʻಗೃಹಲಕ್ಷ್ಮೀʼಯರಿಗೆ ಶಾಕ್: ಸರ್ವೆ ಮುಗಿಯೋವರೆಗೂ ಅಕೌಂಟ್‌ಗೆ ಹಣ ಬರಲ್ಲ
ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಅಲ್ಲದೆ, ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಸಂಗ್ರಹಿಸಿ ಆರೋಪಿಗಳ ಗುರುತು ಪತ್ತೆಹಚ್ಚುವ ಪ್ರಯತ್ನ ನಡೆಯುತ್ತಿದೆ. ಹೈದರಾಬಾದ್‌ನ ಓಲ್ಡ್ ಸಿಟಿ ಪ್ರದೇಶದಲ್ಲಿ ನಡೆದಿರುವ ಈ ಹತ್ಯೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಆದರೆ ಈ ಹತ್ಯೆ ಯಾವುದೇ ರಾಜಕೀಯ ವಿವಾದದ ಹಿನ್ನೆಲೆಯಲ್ಲಿ ನಡೆದಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಅಲಿ ಅವರ ರಾಜಕೀಯ ಚಟುವಟಿಕೆಗಳಿಗೆ ಈ ಕೊಲೆಗೆ ಸಂಬಂಧವಿದೆಯೇ ಎಂಬುದನ್ನೂ ಪೊಲೀಸರು ಈವರೆಗೆ ದೃಢಪಡಿಸಿಲ್ಲ. ಇದನ್ನೂ ಓದಿ: ಬೆಂಗಳೂರಲ್ಲಿ ಉದ್ಯಮಿ ಕಿಡ್ನ್ಯಾಪ್ ಆರೋಪ; ಆಂಧ್ರದ ಮೈದುಕುರ್ ಶಾಸಕರ ವಿರುದ್ಧ FIR
ಮೆಹಬೂಬ್ ಅಲಿ ಅವರ ಹತ್ಯೆಯೊಂದಿಗೆ ಈ ವರ್ಷದ ಆಗಸ್ಟ್‌ವರೆಗೆ ಹೈದರಾಬಾದ್‌ನ ಓಲ್ಡ್ ಸಿಟಿ ಪ್ರದೇಶದಲ್ಲಿ ಆರು ಕೊಲೆ ಪ್ರಕರಣಗಳು ನಡೆದಿವೆ ಎಂದು ವರದಿಯಾಗಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಪಶುವೈದ್ಯರ ನೇಮಕಾತಿ ಹಗರಣ – KPSC ಪರೀಕ್ಷೆ ಬರೆಯಲು ಬೆಂಗಳೂರಿಗೆ ಹೋಗಿದ್ದ ಬಸವರಾಜ್ ಕನ್ನಾಳೆ ಇಂದು ಕೋಟ್ಯಾಧಿಪತಿ
