ಹೈದರಾಬಾದ್: ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ ಶನಿವಾರ ಆರಂಭವಾಗಿರುವ ರಾಜ್ಯ ವಿಧಾನಸಭೆಯ (Telangana Legislative Assembly) ಮೊದಲ ಅಧಿವೇಶನಕ್ಕೆ ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ತಮಿಳಿಸೈ ಸೌಂದರರಾಜನ್ (Tamilisai Soundararajan) ಪ್ರಮಾಣ ವಚನ ಬೋಧಿಸಿದ್ದಾರೆ. ಇದನ್ನೂ ಓದಿ: ಶತ್ರು ಸೇನೆಗಳಿಂದ ರಕ್ಷಣೆಗೆ ಮಾಸ್ಟರ್ ಪ್ಲ್ಯಾನ್ – ಫೈಟರ್ ಜೆಟ್‌ಗಳಿಗೆ ಶೀಘ್ರವೇ ಬರಲಿದೆ ಡಿಜಿಟಲ್ ನಕ್ಷೆ
Advertisement
Advertisement
ಭಾರತದ ಸಂವಿಧಾನದ 180ನೇ ವಿಧಿಯ ಷರತ್ತು (1) ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ತೆಲಂಗಾಣ ರಾಜ್ಯಪಾಲರು ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ (Telangana Assembly Speaker), ಆಗಿ ನೇಮಿಸಿದ್ದಾರೆ. ಚುನಾಯಿತ ಸದಸ್ಯರಲ್ಲಿ ಒಬ್ಬರನ್ನು ಸ್ಪೀಕರ್ ಆಗಿ ನೇಮಿಸುವವರೆಗೆ ಅಕ್ಬರುದ್ದೀನ್ ಸ್ಪೀಕರ್ ಆಗಿ ಅಧಿವೇಶನ ನಿರ್ವಹಿಸಲಿದ್ದಾರೆ. ಇದನ್ನೂ ಓದಿ: ಐಸಿಸ್ ಉಗ್ರರೊಂದಿಗೆ ನಂಟು; ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ
Advertisement
Advertisement
ಇತ್ತೀಚೆಗಷ್ಟೇ ಮುಕ್ತಾಯಗೊಂಡ ತೆಲಂಗಾಣ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಕಾಂಗ್ರೆಸ್ 64 ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢವಾಗಿದ್ದ ಭಾರತ್ ರಾಷ್ಟ್ರ ಸಮಿತಿ 39 ಹಾಗೂ ಬಿಜೆಪಿ 8 ಸ್ಥಾನಗಳನ್ನ ಪಡೆದುಕೊಂಡಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (TPCC) ಅಧ್ಯಕ್ಷರಾಗಿದ್ದ ರೇವಂತ್ ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ದೇಶದಲ್ಲಿ ಅತ್ಯಂತ ಕಿರಿಯ ವಯಸ್ಸಿಗೆ ಸಿಎಂ ಹುದ್ದೆ ಅಲಂಕರಿಸಿದ ಖ್ಯಾತಿ ಗಳಿಸಿದ್ದಾರೆ.