ರಾಂಚಿ: ಜಾರ್ಖಂಡ್‌ನ (Jharkhand) ರಾಂಚಿಯ ಛತ್ರಾ ಜಿಲ್ಲೆಯಲ್ಲಿ (Ranchi) ಏರ್ ಅಂಬುಲೆನ್ಸ್ (Air Ambulance) ಪತನಗೊಂಡಿದೆ.
ರಾಂಚಿಯಿಂದ ದೆಹಲಿಯತ್ತ ಏಳು ಜನರನ್ನು ಹೊತ್ತೊಯ್ಯುತಿದ್ದ ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ರೆಡಾರ್ ಸಂಪರ್ಕ ಕಡಿತಗೊಂಡು ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಜೆ 7:34ಕ್ಕೆ ಎಟಿಸಿಯಿಂದ ಸಂಪರ್ಕ ಕಡಿತಗೊಂಡಿದೆ. ಪೈಲೆಟ್ ಸೇರಿ ವಿಮಾನದಲ್ಲಿದ್ದ 7 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಮಾನದಲ್ಲಿ ರೋಗಿ, ವೈದ್ಯರು, ನರ್ಸ್ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ರೆಡ್‌ಬರ್ಡ್ ಏರ್‌ವೇಸ್ ಪ್ರೈ.ಲಿ ಕಂಪನಿಯ ಬೀಚ್ ಕ್ರಾಫ್ಟ್ ಕಿಂಗ್ ಏರ್ BE9L ಚಾರ್ಟೆಡ್ ವಿಮಾನ ಇದಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅರಣ್ಯದಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿದೆ.

