ಜೈಪುರ: ಭಾರತದ ರಕ್ಷಣಾ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸ್ವದೇಶಿ ನಿರ್ಮಿತ ಮೊದಲ ಲಘು ಯುದ್ಧ ಹೆಲಿಕಾಪ್ಟರ್ (Light Combat Helicopter) ಅನ್ನು ಇಂದು ವಾಯುಸೇನೆಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ (IAF chief Air Chief Marshal VR Chaudhari) ಅವರ ಉಪಸ್ಥಿತಿಯಲ್ಲಿ ಜೋಧಪುರದಲ್ಲಿ (Jodhpur) ನಡೆದ ಕಾರ್ಯಕ್ರಮದಲ್ಲಿ ಪ್ರಚಂಡ್(Prachand) ಸೇನೆಗೆ ಸೇರ್ಪಡೆ ಮಾಡಿಕೊಳ್ಳಲಾಯಿತು.
ಬೆಂಗಳೂರಿನಲ್ಲಿರುವ ಹೆಚ್‍ಎಎಲ್ ಈ ಲಘು ಯುದ್ಧ ಹೆಲಿಕಾಪ್ಟರ್ ನಿರ್ಮಿಸಿದ್ದು ಇದು ಭಾರತೀಯ ವಾಯು ಮತ್ತು ಭೂ ಸೇನೆಗೆ ಹೆಚ್ಚು ಬಲ ತಂದು ಕೊಡಲಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. ಇದನ್ನೂ ಓದಿ: 30 ವರ್ಷದ ಹಳೆ ದ್ವೇಷ – ವೃದ್ಧದಂಪತಿ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಮಾಜಿ ಸೈನಿಕ
Advertisement
For a long time, there was a need for attack helicopters & during the 1999 Kargil war, its need was felt seriously. The LCH is a result of research & development for two decades. And its induction into IAF is an important milestone in defence production: Defence Minister R Singh pic.twitter.com/zU5KrCUjwk
— ANI (@ANI) October 3, 2022
Advertisement
5.8 ಟನ್ ತೂಕದ ಅವಳಿ-ಎಂಜಿನ್ LCH ಶಕ್ತಿ ಅನ್ನು ಈ ಹೆಲಿಕಾಪ್ಟರ್ ಹೊಂದಿದ್ದು, ಇದನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಫ್ರೆಂಚ್ ಎಂಜಿನ್ ತಯಾರಕ ಸಫ್ರಾನ್ ಸಹಯೋಗದೊಂದಿಗೆ ಅಭಿವೃದ್ಧಿಪಡಲಾಗಿದೆ. ಹೊಸ ತಂತ್ರಜ್ಞಾನದ ಅಗತ್ಯವಿರುವ ಚುರುಕುತನ ಇದರಲ್ಲಿದ್ದು, ಕುಶಲತೆ, ವಿಸ್ತೃತ ಶ್ರೇಣಿ, ಹೆಚ್ಚಿನ ಎತ್ತರದ ಕಾರ್ಯಕ್ಷಮತೆ ಮತ್ತು ಎಲ್ಲಾ ಹವಾಮಾನದಲ್ಲೂ ಯುದ್ಧ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನೂ ಓದಿ: ವಿಮಾನಕ್ಕೆ ಬಾಂಬ್ ಬೆದರಿಕೆ- ಯುದ್ಧ ವಿಮಾನಗಳಿಂದ ಭದ್ರತೆ
Advertisement
I would be in Jodhpur, Rajasthan tomorrow, 3rd October, to attend the Induction ceremony of the first indigenously developed Light Comat Helicopters (LCH). The induction of these helicopters will be a big boost to the IAF’s combat prowess. Looking forward to it. pic.twitter.com/L3nTfkJx5A
— Rajnath Singh (@rajnathsingh) October 2, 2022
Advertisement
ಇದು ಅತ್ಯಂತ ಬಿಸಿ ವಾತಾವರಣದ ಮರುಭೂಮಿಯಲ್ಲಿ ಮತ್ತು ಸಿಯಾಚಿನ್‍ನಂತಹ ಅತಿ ತಣ್ಣನೆಯ ಪ್ರದೇಶದಲ್ಲಿ ಲ್ಯಾಂಡ್ ಮಾಡಬಹುದಾಗಿದ್ದು, ಸಮುದ್ರ ಮಟ್ಟದಿಂದ 5,000 ಮೀಟರ್ ಎತ್ತರ ಪ್ರದೇಶದಲ್ಲೂ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲದು. ಶಸ್ತ್ರ ಸಜ್ಜಿತ ರಕ್ಷಣಾ ವ್ಯವಸ್ಥೆಗಳನ್ನು ಹೊಂದಿದ್ದು ಇದು ಸೇನೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸಬಲ್ಲದು ಮತ್ತು ನಿಧಾನವಾಗಿ ಸಾಗುವ ಶತ್ರು ವಿಮಾನಗಳ ಮೇಲೆ ಪ್ರತಿದಾಳಿ ಮಾಡುವ ವಿಶಿಷ್ಟತೆಯನ್ನು ಹೊಂದಿದೆ.
ಇದು ರಾತ್ರಿ ಹೊತ್ತಿನಲ್ಲೂ ಕಾರ್ಯಾಚರಣೆ ಮಾಡುವ ಶಕ್ತಿ ಹೊಂದಿದ್ದು, ಕಾಡು, ಮಳೆ, ಹಿಮಪಾತದಂತಹ ಪ್ರಕೃತಿ ವೈಪರೀತ್ಯಗಳ ನಡುವೆ ಕ್ಷಮತೆಯಿಂದ ಕೆಲಸ ಮಾಡಬಲ್ಲದು. ಇದು ಶತ್ರು ದೇಶಗಳ ರೇಡಾರ್ ಕಣ್ಣು ತಪ್ಪಿಸಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿದೆ. ಈ ವಿಶಿಷ್ಟ ಹೆಲಿಕಾಪ್ಟರ್‌ಗೆ ಬೇಡಿಕೆ ಹೆಚ್ಚಿದ್ದು ಭಾರತೀಯ ವಾಯುಸೇನೆ 65 ಮತ್ತು ಭೂಸೇನೆ 95 ಹೆಲಿಕಾಪ್ಟರ್‌ಗಳಿಗೆ ಬೇಡಿಕೆ ಇಟ್ಟಿದೆ. ವರ್ಷಕ್ಕೆ 30 ಹೆಲಿಕಾಪ್ಟರ್ ನಿರ್ಮಿಸುವ ಸಾಮರ್ಥ್ಯವಿದ್ದು ಆರಂಭಿಕವಾಗಿ 15 ಹೆಲಿಕಾಪ್ಟರ್‌ಗಳನ್ನು ಸೇನೆಗೆ ಇಂದು ಹಸ್ತಾಂತರಿಸಲಾಗಿದೆ.