ಲಕ್ನೋ: ಗುರುಗ್ರಾಮ್‌ನ (Gurugram) ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗಲೇ ಗಗನಸಖಿ (Air Hostess) ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಈ ಸಂಬಂಧ ಖುದ್ದು ಮಹಿಳೆ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದೇ ತಿಂಗಳ ಏಪ್ರಿಲ್ 13ರಂದು 43 ವರ್ಷದ ಗಗನಸಖಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ತನ್ನ ಪತಿಗೆ ವಿಷಯ ತಿಳಿಸಿದ್ದಾಳೆ. ಬಳಿಕ ಆಕೆ ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಏನಿದು ಪ್ರಕರಣ?
ಮಹಿಳೆ ದೂರು ನೀಡಿದ ಪ್ರಕಾರ, ಆಕೆ ಸಂಬಂಧಪಟ್ಟ ಕಂಪನಿಯ ಪರವಾಗಿ ತರಬೇತಿಗಾಗಿ ಗುರುಗ್ರಾಮ್‌ಗೆ ಬಂದಿದ್ದಳು, ಈ ವೇಳೆ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದಳು. ಈ ಸಂದರ್ಭದಲ್ಲಿ ಆಕೆ ನೀರಿನಲ್ಲಿ ಮುಳುಗಿ ಆರೋಗ್ಯ ತೀರಾ ಹದಗೆಟ್ಟಿತ್ತು. ಬಳಿಕ ಆಕೆಯನ್ನ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಲಾಗಿತ್ತು. ಇದೇ ತಿಂಗಳ ಏಪ್ರಿಲ್ 5 ರಂದು ಪತಿ ಆಕೆಯನ್ನ ಹೆಚ್ಚುವರಿ ಚಿಕಿತ್ಸೆಗಾಗಿ ಗುರುಗ್ರಾಮ್‌ನ ಬೇರೋಂದು ಆಸ್ಪತ್ರೆಗೆ ದಾಖಲಿಸಿದರು. ಆಕೆಯನ್ನು ಏಪ್ರಿಲ್ 13 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಆದ್ರೆ ಏಪ್ರಿಲ್ 6ರಂದು ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಆಸ್ಪತ್ರೆಯ ಕೆಲವು ಸಿಬ್ಬಂದಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ವೆಂಟಿಲೇಟರ್‌ನಲ್ಲಿದ್ದ ಕಾರಣ ನನಗೆ ಆಗ ಮಾತನಾಡಲೂ ಸಾಧ್ಯವಾಗಲಿಲ್ಲ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದೆ. ದೌರ್ಜನ್ಯ ನಡೆಯುವಾಗ ನನ್ನ ಅಕ್ಕಪಕ್ಕ ಇಬ್ಬರು ನರ್ಸ್‌ಗಳೂ ಇದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಗುರುಗ್ರಾಮ್‌ನ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ತಂಡವು ಆಸ್ಪತ್ರೆಗೆ ಧಾವಿಸಿ ಡ್ಯೂಟಿ ಚಾರ್ಟ್ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂಉದ ಗುರುಗ್ರಾಮ್ ಪೊಲೀಸ್ ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್ ತಿಳಿಸಿದ್ದಾರೆ.