ನವದೆಹಲಿ: 230 ಪ್ರಯಾಣಿಕರನ್ನು ಹೊತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ (Air India Flight) ತಾಂತ್ರಿಕ ದೋಷದಿಂದಾಗಿ (Technical Snag) 8 ಗಂಟೆಗಳ ಕಾಲ ಆಗಸದಲ್ಲೇ ಹಾರಾಟ ನಡೆಸಿ ದೆಹಲಿಗೆ (Delhi) ವಾಪಸ್ ಆಗಿದೆ.
ಮೇ 27ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ (San Francisco) ಹೊರಟಿದ್ದ ಎಐ173 ವಿಮಾನವು ಮೂರು ಗಂಟೆಗಳ ಹಾರಾಟ ನಡೆಸಿ ಬಳಿಕ ತಾಂತ್ರಿಕ ದೋಷ ಹಿನ್ನೆಲೆ ಚೀನಾ ವಾಯುಪ್ರದೇಶದಿಂದ ಯೂಟರ್ನ್ ತೆಗೆದುಕೊಂಡು ದೆಹಲಿಗೆ ಹಿಂತಿರುಗಿದೆ. ಸದ್ಯ ವಿಮಾನ ದೆಹಲಿಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತಾಂತ್ರಿಕ ಪರಿಶೀಲನೆ ನಡೆಯಲಿದೆ ಎಂದು ಏರ್ ಇಂಡಿಯಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ನಾವು ಕಳವಳ ವ್ಯಕ್ತಪಡಿಸಿದೆವು, ಸಿಎಂ ಸಿದ್ದರಾಮಯ್ಯ ಸೈಲೆಂಟ್ ಆಗಿದ್ರು: ಹೆಚ್.ಕೆ.ಪಾಟೀಲ್
ಪ್ರಯಾಣಿಕರಿಗೆ ಆಗಿರುವ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ಪ್ರಯಾಣಿಕರನ್ನು ನಿಗದಿತ ಸ್ಥಳಗಳಿಗೆ ತಲುಪಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗುತ್ತದೆ. ನಮ್ಮ ಸಿಬ್ಬಂದಿ ಪ್ರಯಾಣಿಕರಿಗೆ ಊಟದ ವ್ಯವಸ್ಥೆ, ಹೋಟೆಲ್ ಸೇರಿದಂತೆ ಎಲ್ಲಾ ರೀತಿಯ ನೆರವನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ಹೇಳಿದೆ. ಇದನ್ನೂ ಓದಿ: ಸ್ನ್ಯಾಪ್‌ಚಾಟ್‌ನಲ್ಲಿ ಪರಿಚಯ, ಪ್ರೀತಿಸಿ ಮದುವೆ – ಎರಡೇ ತಿಂಗಳಲ್ಲಿ ಪತ್ನಿ ಬೇಡ ಎಂದ ಪತಿ
