ಅಮರಾವತಿ: ವಿಜಯವಾಡದಿಂದ (Vijayawada) ಬೆಂಗಳೂರಿಗೆ (Bengaluru) ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.
ಟೇಕಾಫ್‌ಗಾಗಿ AI 9841 ವಿಮಾನವನ್ನು ರನ್‌ವೇಗೆ ತರುತ್ತಿದ್ದಾಗ ಹದ್ದು ವಿಮಾನದ ಮೂತಿಗೆ ಡಿಕ್ಕಿ ಹೊಡೆದಿದೆ. ವಿಮಾನದಲ್ಲಿ 90 ಜನ ಪ್ರಯಾಣಿಕರಿದ್ದರು. ಬಳಿಕ ವಿಮಾನ ಹಾರಾಟವನ್ನು ರದ್ದುಗೊಳಿಸಿ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಯಿತು. ಇನ್ನೂ, ಈ ವಿಮಾನ ಇಂದು (ಸೆ.4) ಬೆಳಗ್ಗೆ 8:15ಕ್ಕೆ ವಿಜಯವಾಡದಿಂದ ಹೊರಟು 9:40ಕ್ಕೆ ಬೆಂಗಳೂರು ತಲುಪಬೇಕಿತ್ತು. ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ವಿಮಾನದ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದರೆ ಏನಾಗುತ್ತೆ?
ಇತ್ತೀಚೆಗೆ ನಾಗ್ಪುರದಿಂದ ಕೋಲ್ಕತ್ತಾಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿತ್ತು. ಬಳಿಕ ನಾಗ್ಪುರ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿತ್ತು. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 2020 ರಿಂದ ಇಲ್ಲಿಯವರೆಗೆ 343 ಬಾರಿ ಪಕ್ಷಿಗಳು ಡಿಕ್ಕಿ