ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

Public TV
1 Min Read
air india flight

ಬ್ಯಾಂಕಾಕ್: ಅಹಮದಾಬಾದ್‌ ದುರಂತದ ಬೆನ್ನಲ್ಲೇ ಥೈಲ್ಯಾಂಡ್‌ನ (Thailand) ಫುಕೆಟ್‌ನಿಂದ ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾಗೆ (Air India Flight) ಬಾಂಬ್‌ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಶುಕ್ರವಾರ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನವು ಸುರಕ್ಷಿತವಾಗಿ ಇಳಿಯಿತು. ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಡ್ಡಾಯ ಭದ್ರತಾ ತಪಾಸಣೆಗೆ ಒಳಗಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Plane Crash 6

ತುರ್ತು ಯೋಜನೆಗಳಿಗೆ ಅನುಗುಣವಾಗಿ ಪ್ರಯಾಣಿಕರನ್ನು ವಿಮಾನ AI 379 ನಿಂದ ಹೊರಗೆ ಕರೆದೊಯ್ಯಲಾಯಿತು ಎಂದು ಥೈಲ್ಯಾಂಡ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಿಮಾನದ ಕ್ರೂಸಿಂಗ್ ಹಂತದಲ್ಲಿ ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಲಾಯಿತು. ನಂತರ ಪೈಲಟ್ ಮಾರ್ಗ ಮಧ್ಯದಲ್ಲೇ ಫುಕೆಟ್‌ಗೆ ಹಿಂತಿರುಗಿದರು. ಪ್ರಾಥಮಿಕ ಶೋಧದ ನಂತರ ಅಧಿಕಾರಿಗಳು ವಿಮಾನದೊಳಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

ವಿಮಾನದಲ್ಲಿ 156 ಪ್ರಯಾಣಿಕರಿದ್ದರು. ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಶುಕ್ರವಾರ ಸ್ಥಳೀಯ ಕಾಲಮಾನ ಬೆಳಗ್ಗೆ 9:30 ಕ್ಕೆ ಫುಕೆಟ್ ವಿಮಾನ ನಿಲ್ದಾಣದಿಂದ ಭಾರತದ ರಾಜಧಾನಿಗೆ ಹೊರಟ ವಿಮಾನವು ಅಂಡಮಾನ್ ಸಮುದ್ರದ ಸುತ್ತಲೂ ವಿಶಾಲವಾದ ಲೂಪ್ ಮಾಡಿ ಥಾಯ್ ದ್ವೀಪದಲ್ಲಿ ಮತ್ತೆ ಇಳಿಯಿತು ಎಂದು ಫ್ಲೈಟ್ ಟ್ರ್ಯಾಕರ್ ಫ್ಲೈಟ್‌ರಾಡರ್ 24 ತಿಳಿಸಿದೆ.

Share This Article