ನವದೆಹಲಿ: ವಿಮಾನ ಟೇಕಾಫ್ ಆದ ಬಳಿಕ ಅದರ ಟಯರ್‌ನ ಭಾಗಗಳು ರನ್‍ವೇಯಲ್ಲಿ ಪತ್ತೆಯಾದ ಘಟನೆ ದೆಹಲಿಯಲ್ಲಿ ನಡೆದಿದೆ. ಇದನ್ನೂ ಗಮನಿಸಿದ ವಿಮಾನ ನಿಲ್ದಾಣದ ಸಿಬ್ಬಂದಿ ಕೂಡಲೇ ಎಟಿಸಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವಿಮಾನವನ್ನು ವಾಪಸ್ ಮರಳುವಂತೆ ಸೂಚನೆ
ಏರ್ ಇಂಡಿಯಾ (Air India) ವಿಮಾನ (Flight) ದೆಹಲಿಯಿಂದ (Delhi) ಪ್ಯಾರಿಸ್‍ಗೆ (Paris) ತೆರಳುತ್ತಿತ್ತು. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಟೈರ್‌ನ ಭಾಗಗಳು ರನ್ ವೇಯಲ್ಲಿ ಕಾಣಿಸಿದೆ. ಬಳಿಕ ದೆಹಲಿ ಏರ್ ಟ್ರಾಫಿಕ್ ಕಂಟ್ರೋಲ್ (ATC) ನೀಡಿದ ಮಾಹಿಯ ಆಧಾರದ ಮೇಲೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಇದನ್ನೂ ಓದಿ: ಸಾಲ ಮಾಡಿ ಲಾಟರಿ ಟಿಕೆಟ್ ಖರೀದಿಸಿದ ಪೌರಕಾರ್ಮಿಕ ಮಹಿಳೆಯರಿಗೆ 10 ಕೋಟಿ ರೂ. ಬಂಪರ್
ಪ್ರಯಾಣಿಕರಿಗೆ ಆದ ಅನಾನುಕೂಲತೆಗಾಗಿ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ. ಪ್ರಯಾಣಿಕರ ಸುರಕ್ಷತೆಗೆ ಏರ್ ಇಂಡಿಯಾ ಮೊದಲ ಆದ್ಯತೆ ನೀಡುತ್ತದೆ. ಇದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತದೆ. ಪ್ರಯಾಣಿಕರಿಗೆ ಯಾವುದೇ ಹಾನಿಯಾದ ವರದಿ ಆಗಿಲ್ಲ. ಪ್ರಯಾಣಿಕರನ್ನು ಪ್ಯಾರಿಸ್‍ಗೆ ಕಳುಹಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಪಘಾತವಾದ ಕಾರಿಗೆ ವಿದ್ಯುತ್ ಶಾಕ್ – ಸಹಾಯಕ್ಕೆ ಬಂದ ಇಬ್ಬರು ಸಾವು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]