ಏರ್ ಇಂಡಿಯಾ ವಿಮಾನ ಪತನ – 80 ಜನರ ಡಿಎನ್‌ಎ ಮ್ಯಾಚ್, 33 ಮೃತದೇಹಗಳ ಹಸ್ತಾಂತರ

Public TV
1 Min Read
Ahmedabad Air India Plane Crash 1

ಅಹಮದಾಬಾದ್: ತಾಂತ್ರಿಕ ದೋಷದಿಂದ ಅಹಮದಾಬಾದ್‌ನಲ್ಲಿ (Ahmedabad) ಏರ್ ಇಂಡಿಯಾ (Air India) ವಿಮಾನ ಪತನ ಘಟನೆಯಲ್ಲಿ ಮೃತಪಟ್ಟವರ ಡಿಎನ್‌ಎ ಟೆಸ್ಟ್ (DNA Test) ಪ್ರಕ್ರಿಯೆ ನಡೆಯುತ್ತಿದ್ದು, ಈವರೆಗೆ 80 ಜನರ ಡಿಎನ್‌ಎ ಮ್ಯಾಚ್ ಆಗಿದೆ. ಒಟ್ಟು 33 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಅಹಮದಾಬಾದ್ ಮೂಲದ 12 ಮಂದಿ, ಬರೋಡಾದ ಐದು ಮಂದಿ, ಮೆಹ್ಸಾನಾದಿಂದ ನಾಲ್ಕು ಮಂದಿ, ಆನಂದ್‌ನಿಂದ ನಾಲ್ಕು ಮಂದಿ, ಖೇಡಾ, ಭರೂಚ್‌ನಿಂದ ತಲಾ ಇಬ್ಬರು, ಉದಯಪುರ, ಜೋಧ್‌ಪುರ ಬೋಟಾಡ್‌ನಿಂದ ತಲಾ ಒಬ್ಬರ ಮೃತದೇಹ ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಿರುವುದಾಗಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಹೆಚ್ಚುವರಿ ಸೂಪರಿಂಟೆಂಡೆಂಟ್ ಡಾ. ರಜನೀಶ್ ಪಟೇಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿಗೆ ಬ್ರೇಕ್ – ರಸ್ತೆಗಿಳಿದ್ರೆ ಬೈಕ್ ಸೀಜ್

Ahmedabad Plane Crash 1 2

ವಿಮಾನ ದುರಂತ ಸಂಭವಿಸಿದ ಮೂರು ದಿನಗಳ ನಂತರ ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಮೃತದೇಹದ ಗುರುತು ಪತ್ತೆಯಾಗಿದೆ. ಈ ಕುರಿತು ರಾಜ್ಯದ ಗೃಹ ಸಚಿವ ಹರ್ಷ್ ಸಾಂಘವಿ ಮಾಹಿತಿ ನೀಡಿದ್ದಾರೆ. ಭಾನುವಾರ ಬೆಳಗ್ಗೆ 11:10ಕ್ಕೆ ಬಂದ ಡಿಎನ್‌ಎ ವರದಿಯಲ್ಲಿ ರೂಪಾನಿ ಅವರ ಡಿಎನ್‌ಎಗೆ ಮ್ಯಾಚ್ ಆಗಿದೆ ಎಂದು ತಿಳಿಸಿದ್ದಾರೆ. ರೂಪಾನಿ ಅವರ ಸಹೋದರಿಯಿಂದ ಸ್ಯಾಂಪಲ್ ಪಡೆದು ಡಿಎನ್‌ಎ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆ ವೇಳೆ ಡಿಎನ್‌ಎ ಮಾಚ್ ಆಗಿದ್ದು ಮೂರು ದಿನಗಳ ಬಳಿಕ ಮೃತದೇಹದ ಗುರುತು ಪತ್ತೆಯಾಗಿದೆ. ಇಂದು ರಾಜ್‌ಕೋಟ್‌ನಲ್ಲಿ ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಮುಂದುವರಿದ ಮಳೆ ಆರ್ಭಟ – ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಅಲರ್ಟ್

ಏರ್ ಇಂಡಿಯಾ ವಿಮಾನ ಪತನ ದುರಂತದಲ್ಲಿ ಮೃತಪಟ್ಟವರ ಡಿಎನ್‌ಎ ಮ್ಯಾಚ್ ಮಾಡುವ ಕಾರ್ಯ ನಡೆಯುತ್ತಿದೆ. ಮೃತದೇಹಗಳಿಗಾಗಿ ಸಂಬಂಧಿಕರು ಇನ್ನೂ ಕಾಯುತ್ತಿದ್ದಾರೆ. ಸಿವಿಲ್ ಆಸ್ಪತ್ರೆಯಲ್ಲಿ ಹತ್ತಾರು ಕುಟುಂಬಗಳ ಕುಟುಂಬಸ್ಥರು ಮೃತದೇಹಕ್ಕಾಗಿ ಕಾಯುತ್ತಿದ್ದಾರೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ – 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ

Share This Article