ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಸಾವು ಗೆದ್ದು ಬಂದಿದ್ದ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Public TV
2 Min Read
Vishwas Kumar Ramesh the sole survivor of the Air India plane crash

– ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಕಣ್ಣೀರಿಟ್ಟ ವಿಶ್ವಾಸ್‌ ಕುಮಾರ್‌

ಗಾಂಧೀನಗರ: ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ (Air India Plane Crash) ವಿಮಾನ ಭೀಕರ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ಪ್ರಯಾಣಿಕ ವಿಶ್ವಾಸ್‌ ಕುಮಾರ್‌ ರಮೇಶ್‌ (Vishwas Kumar Ramesh) ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಹಾಸ್ಟೆಲ್‌ವೊಂದಕ್ಕೆ ವಿಮಾನ ಡಿಕ್ಕಿಯಾಗಿ ಅವಘಡ ಸಂಭವಿಸಿದಾಗ, ತುರ್ತು ನಿರ್ಗಮನ ಬಾಗಿಲು ತೆರೆದು ವಿಶ್ವಾಸ್‌ ಜಿಗಿದು ಬದುಕುಳಿದಿದ್ದರು. ಸಣ್ಣಪುಟ್ಟ ಗಾಯಗಳಿಂದ ಅಹಮದಾಬಾದ್‌ನ ಸಿವಿಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಗಣ್ಯರು ಗಾಯಾಳು ಆರೋಗ್ಯ ವಿಚಾರಿಸಿದ್ದರು. ಇದನ್ನೂ ಓದಿ: ಬೆಂಗಳೂರು – ಲಂಡನ್‌ ಸೇರಿದಂತೆ ದಿಢೀರ್‌ 7 ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

Ahmedabad Plane Crash Survivor

ಚಿಕಿತ್ಸೆ ಬಳಿಕ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದರು. ನಂತರ ತನ್ನ ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು. ತನ್ನ ಜೊತೆ ಪ್ರಯಾಣಿಸಿದ್ದ ಸಹೋದರ ವಿಮಾನ ಪತನದಲ್ಲಿ ಮೃತಪಟ್ಟಿದ್ದ.

ಜೂನ್ 12 ರಂದು ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ 40 ವರ್ಷದ ಬ್ರಿಟಿಷ್ ಪ್ರಜೆ ವಿಶ್ವಾಸ್. ವಿಮಾನ ಅಪಘಾತದ ಸುದ್ದಿ ತಿಳಿದ ನಂತರ ವಿಶ್ವಾಸ್ ಅವರ ಕುಟುಂಬ ಯುಕೆಯಿಂದ ಆಗಮಿಸಿತು. ವಿಶ್ವಾಸ್ ಮತ್ತು ಅವರ ಸಹೋದರ ಇಬ್ಬರೂ ದಿಯು ಮೂಲದವರಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಭಾರತಕ್ಕೆ ವಿಮಾನದಲ್ಲಿ ಬಂದಿದ್ದರು.‌ ಇದನ್ನೂ ಓದಿ: ಏರ್‌ ಇಂಡಿಯಾ ಎಂಜಿನಿಯರಿಂಗ್ ಮುಖ್ಯಸ್ಥನಿಗೆ ಡಿಜಿಸಿಎ ಬುಲಾವ್ – ಬೋಯಿಂಗ್ 787 ವಿಮಾನಗಳ ತಾಂತ್ರಿಕ ಸಮಸ್ಯೆ ಬಗ್ಗೆ ಚರ್ಚೆ

Ahmedabad Plane Crash 1 2

ಬುಧವಾರ ಬೆಳಗ್ಗೆ ಅಜಯ್ ಅವರ ಅಂತ್ಯಕ್ರಿಯೆಯನ್ನು ಕುಟುಂಬವು ದಿಯುನಲ್ಲಿ ನಡೆಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಡಿಎನ್ಎ ಮಾದರಿಯು ಅವರ ಗುರುತನ್ನು ದೃಢಪಡಿಸಿದ ನಂತರ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು.

ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಬೋಯಿಂಗ್ 787 ಡ್ರೀಮ್‌ಲೈನರ್ ಏರ್‌ ಇಂಡಿಯಾ ವಿಮಾನ 171 ಅಪಘಾತಕ್ಕೀಡಾಗಿದೆ. ದುರಂತದಲ್ಲಿ 270 ಮಂದಿ ಮೃತಪಟ್ಟಿದ್ದಾರೆ. ಅಪಘಾತದ ಕೆಲವೇ ಕ್ಷಣಗಳ ನಂತರ ವೈರಲ್ ಆಗಿರುವ ವೀಡಿಯೊದಲ್ಲಿ, ಗಾಯಗೊಂಡಿದ್ದ ವಿಶ್ವಾಸ್ ಅಂಬುಲೆನ್ಸ್‌ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ – ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ ಸಿಬ್ಬಂದಿ

Share This Article