ನವದೆಹಲಿ: ಭಾರತೀಯ ವಾಯುಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರು ನೇಮಕಗೊಂಡಿದ್ದಾರೆ.
Advertisement
ಪ್ರಸ್ತುತ ಏರ್ ಚೀಫ್ ಮಾರ್ಷಲ್ ಆಗಿರುವ ಆರ್‌ಕೆಎಸ್ ಭದೌರಿಯಾ ಅವರು ಸೆಪ್ಟೆಂಬರ್ 30 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿ ಬಳಿಕ ಭಾರತೀಯ ವಾಯುಸೇನೆಯ ಮುಖ್ಯಸ್ಥರಾಗಿ ವಿ.ಆರ್ ಚೌಧರಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ಹೊರಹಾಕಿದೆ. ಇದನ್ನೂ ಓದಿ: ಇಂದಿನಿಂದ ಪ್ರಧಾನಿ ಮೋದಿ ನಾಲ್ಕು ದಿನ ಅಮೆರಿಕ ಪ್ರವಾಸ
Advertisement
Advertisement
ಏರ್ ಮಾರ್ಷಲ್ ಚೌಧರಿ ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದು, ಸೆಪ್ಟೆಂಬರ್ 30 ರಂದು ಆರ್‌ಕೆಎಸ್ ಭದೌರಿಯಾ ಅವರು ನಿವೃತ್ತಿ ಬಳಿಕ ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿಂದೆ ಏರ್ ಮಾರ್ಷಲ್ ಚೌಧರಿ ಅವರು 1982ರ ಡಿಸೆಂಬರ್ 29ರಂದು ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‍ಗೆ ನಿಯೋಜನೆಗೊಂಡಿದ್ದರು. ಅದಲ್ಲದೆ ಆಪರೇಷನ್ ಮೇಘದೂತ್, ಸಫೇದ್ ಸಾಗರ್ ಸೇರಿ ಹಲವು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.
Advertisement
Government has decided to appoint Air Marshal V R Chaudhari, PVSM, AVSM, VM presently Vice Chief of Air Staff as the next Chief of Air Staff. Current Chief of Air Staff Air Chief Marshal RKS Bhadauria, PVSM, AVSM, VM, ADC retires from Service on 30th Sep 2021
— A. Bharat Bhushan Babu (@SpokespersonMoD) September 21, 2021
ಚೌಧರಿಯ 2021ರ ಜುಲೈ 1ರಂದು ಏರ್ ಮಾರ್ಷಲ್ ಎಚ್‍ಎಸ್ ಅರೋರಾ ನಿವೃತ್ತಿಯ ಬಳಿಕ ವಾಯಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚೌಧರಿಯ ಈಗಾಗಲೇ ಫೈಟರ್ ಮತ್ತು ಟ್ರೈನರ್ ವಿಮಾನಗಳಲ್ಲಿ 3,800 ಗಂಟೆಗೂ ಹೆಚ್ಚು ಹಾರಾಟ ಮಾಡಿದ ಅನುಭವವನ್ನು ಹೊಂದಿದ್ದಾರೆ. ಇದನ್ನೂ ಓದಿ: ಬೆಂಕಿ ಹೊತ್ತಿಕೊಂಡಿದ್ದು ಸಿಲಿಂಡರಿನಿಂದಲ್ಲ- ಯುಪಿಎಸ್, ಮೊಬೈಲ್ ಚಾರ್ಜರ್ ಬಗ್ಗೆ ಶಂಕೆ