ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತದ ಪರಿಣಾಮ ಇಂದು (ಡಿ.12) ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ (Indian Meteorological Department) ಯಲ್ಲೋ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ:ಆತ್ಮಾಹುತಿ ಬಾಂಬ್ ದಾಳಿ – ತಾಲಿಬಾನ್ ಪ್ರಭಾವಿ ಸಚಿವ ಸಾವು
Advertisement
ಬೆಂಗಳೂರು (Bengaluru) ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
Advertisement
ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧೆತೆಯಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
Advertisement
ಬೆಂಗಳೂರಲ್ಲಿ ಎಲ್ಲೆಲ್ಲಿ ಮಳೆ?
ಕೆ ಆರ್ ಸರ್ಕಲ್, ವಿಧಾನಸೌಧ, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್, ಕಾರ್ಪೊರೇಷನ್, ಎಂ.ಜಿ ರೋಡ್, ಹಲಸೂರು, ಶೇಷಾದ್ರಿಪುರಂ, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.ಇದನ್ನೂ ಓದಿ: ಜೈಲಿಂದ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ಹತ್ಯೆ – ಮೃತದೇಹ ಕತ್ತರಿಸಿ ನದಿಗೆಸೆದ ಹಂತಕ