ಚಂಡೀಗಢ: ಪಾಕಿಸ್ತಾನ(Pakistan) ಸೇನೆ ದಾಳಿ ಮಾಡುವ ಮುನ್ಸೂಚನೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ವಾಯು ಸೇನೆಯ ಸೂಚನೆಯಂತೆ ಚಂಢೀಗಡದಲ್ಲಿ(Chandigarh) ಸೈರನ್ ಮೊಳಗಿಸಲಾಗಿದೆ. ಜನರು ರಸ್ತೆಗಳಲ್ಲಿ ಓಡಾಡದಂತೆ, ಬಾಲ್ಕನಿಗಳಲ್ಲೂ ಕಾಣಿಸಿಕೊಳ್ಳದಂತೆ ಸೂಚನೆ ನೀಡಲಾಗಿದೆ.
ಗುರುವಾರ ರಾತ್ರಿ ಪಂಜಾಬ್, ಚಂಡೀಗಢದ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್, ಕ್ಷಿಪಣಿ ದಾಳಿ ನಡೆಸಿತ್ತು. ಈ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತೀಯ ಸೇನೆ ಪಾಕಿಸ್ತಾನದ ಕ್ಷಿಪಣಿ, ಡ್ರೋನ್‌ಗಳನ್ನು ಹೊಡೆದುರುಳಿಸಿತ್ತು. ಇದನ್ನೂ ಓದಿ: ಭಾರತ ಮಿಸೈಲ್ ದಾಳಿಗೆ ಪಾಕ್ ತತ್ತರ – ಭಿಕ್ಷೆ ಬೇಡುತ್ತಿದೆ ʻಭಿಕಾರಿಸ್ತಾನʼ
ಪಂಜಾಬ್ ಮತ್ತು ಹರಿಯಾಣದ ರಾಜಧಾನಿ ಚಂಡೀಗಢದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಗಡಿ ಪ್ರದೇಶದಲ್ಲಿರುವ ಮೊಹಾಲಿಯಲ್ಲೂ ಜನತೆಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಉದ್ವಿಗ್ನ ಸ್ಥಿತಿ – ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಹೈಅಲರ್ಟ್
ಉಧಂಪುರ, ಸಾಂಬಾ, ಜಮ್ಮು, ಅಖ್ನೂರ್, ನಾಗ್ರೋಟಾ ಮತ್ತು ಪಠಾಣ್‌ಕೋಟ್ ಪ್ರದೇಶಗಳಲ್ಲಿ ಭಾರತೀಯ ಸೇನೆಯ ವಾಯು ರಕ್ಷಣಾ ಘಟಕಗಳು ನಡೆಸಿದ ದೊಡ್ಡ ಪ್ರಮಾಣದ ಪ್ರತಿ ಡ್ರೋನ್ ಕಾರ್ಯಾಚರಣೆಯಲ್ಲಿ 50 ಕ್ಕೂ ಹೆಚ್ಚು ಡ್ರೋನ್‌ಗಳನ್ನು ಯಶಸ್ವಿಯಾಗಿ ತಟಸ್ಥಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.