ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru-Mysuru Expressway) ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ (Mandya) ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ.ಇದನ್ನೂ ಓದಿ: ಮಹಿಳೆಯರು ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಕೊಳ್ಳಿ: ಮುತಾಲಿಕ್ ಪ್ರಚೋದನಕಾರಿ ಹೇಳಿಕೆ
ಕಾರು ಮೈಸೂರು ಕಡೆಗೆ ಹೊರಟಿತ್ತು. ಈ ವೇಳೆ ಎಕ್ಸ್ಪ್ರೆಸ್‌ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ಪ್ರೆಸ್ ವೇಗೆ ತಿರುಗಿಸಿದ್ದಾನೆ. ಇದೇ ವೇಳೆ ಹಿಂದಿನಿಂದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಬಂದಿದ್ದು, ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.
ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರ ಗುರುತು ಪತ್ತೆಯಾಗಿಲ್ಲ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ (Mandya Rural Police Station) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಬೆಂಗಳೂರಲ್ಲಿ ಬಿಹಾರದ ಯುವತಿ ಮೇಲೆ ರೇಪ್ – ಅಣ್ಣನಿಗೆ ಥಳಿಸಿ ತಂಗಿಯನ್ನು ಎಳೆದೊಯ್ದು ಅತ್ಯಾಚಾರ