ಶಿವಮೊಗ್ಗ: ಬೆಂಗಳೂರಿನಿಂದ (Bengaluru) ತೀರ್ಥಹಳ್ಳಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ (Airavata Bus) ಮುಡುಬಾ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದೆ.
ತೋಟದೊಳಗೆ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಸಮಸ್ಯೆಯಾಗಿಲ್ಲ. ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅನೈತಿಕ ಸಂಬಂಧ ಪ್ರಶ್ನಿಸಿದ ಅಪ್ರಾಪ್ತ ಮಗನ ಕೊಲೆ – ನಾಪತ್ತೆ ದೂರು ನೀಡಿ ನಾಟಕವಾಡಿದ ತಾಯಿ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದವರಿಗೆ ನೆರವಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ ಯತ್ನ – ಕೊಲೆ ಬೆದರಿಕೆಗೆ ಹೆದರಿ ಬೈಕ್‌ನಿಂದ ಜಿಗಿದ ಬಾಲಕಿ
