ನವದೆಹಲಿ: ಪರಿಚಿತನೊಬ್ಬ ಪ್ರತಿನಿತ್ಯ ಕುಡಿದು ಬಂದು ಗಗನಸಖಿ (AirHostess) ಮೇಲೆ ಆಕೆಯ ಮನೆಯಲ್ಲಿ ಅತ್ಯಾಚಾರವೆಸಗಿದ ಘಟನೆ ದಕ್ಷಿಣ ದೆಹಲಿಯ (South Delhi) ಮೆಹ್ರೌಲಿ ಪ್ರದೇಶದಲ್ಲಿ ನಡೆದಿದೆ.
ದೆಹಲಿಯಲ್ಲಿ 30 ವರ್ಷದ ಮಹಿಳೆಯ ಮೇಲೆ ಹರ್ಜಿತ್ ಯಾದವ್ ಖಾನ್‍ಪುರ್ ಎಂಬಾತ ಕಳೆದ ಒಂದೂವರೆ ತಿಂಗಳಿಂದ ಕುಡಿದ ಸ್ಥಿತಿಯಲ್ಲಿ ಆಕೆಯ ಮನೆಗೆ ಬಂದು ಅತ್ಯಾಚಾರ ಎಸಗುತ್ತಿದ್ದನು. ಈತ ರಾಜಕೀಯ ಪಕ್ಷದ ಬ್ಲಾಕ್ ಅಧ್ಯಕ್ಷನಾಗಿದ್ದಾನೆ. ಇದನ್ನೂ ಓದಿ: ರಾಜ್ಯಾದ್ಯಂತ PFI, SDPI ಕಾರ್ಯಕರ್ತರಿಗೆ ಪೊಲೀಸ್ ಶಾಕ್ – 40ಕ್ಕೂ ಹೆಚ್ಚು ಮಂದಿ ವಶಕ್ಕೆ
ಘಟನೆಗೆ ಸಂಬಂಧಿಸಿ ಗಗನ ಸಖಿಯು ಹರ್ಜೀತ್ ಯಾದವ್‍ನನ್ನು ಕೊಣೆಯಲ್ಲಿ ಕೂಡಿ ಹಾಕಿ, ನಂತರ ಪೊಲೀಸರಿಗೆ ಕರೆ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮೆಹ್ರೌಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಗನ ಸಖಿಯನ್ನು ರಕ್ಷಿಸಿ, ಹರ್ಜೀತ್‍ನನ್ನು ಬಂಧಿಸಿದ್ದಾರೆ (Arrest). ಇದನ್ನೂ ಓದಿ: ದಸರಾ ವೇಳೆ RSS, BJP ನಾಯಕರ ಮೇಲೆ ದಾಳಿಗೆ PFI ಸಂಚು