Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ವಾಯು ದಾಳಿ – ಉಗ್ರರ ಮುಖ್ಯಸ್ಥನೇ ಇಸ್ರೇಲ್ ಗುರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ವಾಯು ದಾಳಿ – ಉಗ್ರರ ಮುಖ್ಯಸ್ಥನೇ ಇಸ್ರೇಲ್ ಗುರಿ

Crime

ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ವಾಯು ದಾಳಿ – ಉಗ್ರರ ಮುಖ್ಯಸ್ಥನೇ ಇಸ್ರೇಲ್ ಗುರಿ

Public TV
Last updated: September 28, 2024 9:29 am
Public TV
Share
2 Min Read
Hasan Nasrallah
SHARE

ಜೆರುಸಲೆಂ: ಇಸ್ರೇಲ್ (Israel) ಮತ್ತು ಹಿಜ್ಬುಲ್ಲಾ (Hezbollah) ನಡುವಿನ ದಾಳಿಗಳು ತೀವ್ರಗೊಂಡಿವೆ. ಶುಕ್ರವಾರ ಸಂಜೆ ಇಸ್ರೇಲಿ ವಾಯುಪಡೆಯು ಲೆಬನಾನ್‌ನ  (Lebanon) ರಾಜಧಾನಿ ಬೈರುತ್‌ನಲ್ಲಿ ಭಾರೀ ವಾಯು ದಾಳಿ ನಡೆಸಿದೆ. ಹಿಜ್ಬುಲ್ಲಾದ ಮುಖ್ಯ ಕೇಂದ್ರ ಕಚೇರಿಯ ಮೇಲೆ ದಾಳಿ ನಡೆಸಿರುವುದಾಗಿ ಸೇನೆ ತಿಳಿಸಿದೆ.

ದಾಳಿಯ ಗುರಿಯು ಆ ಸಮಯದಲ್ಲಿ ಕಮಾಂಡ್ ಸೆಂಟರ್‌ನಲ್ಲಿದ್ದ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ (Hasan Nasrallah) ಆಗಿದ್ದ. ಇಸ್ರೇಲಿ ಅಧಿಕಾರಿಯೊಬ್ಬರು ಟೈಮ್ಸ್ ಆಫ್ ಇಸ್ರೇಲ್‌ಗೆ ದೃಢಪಡಿಸಿದರು. ಆದರೆ ದಾಳಿಯಲ್ಲಿ 2 ಬಲಿ ಆಗಿದ್ದು, 76 ಮಂದಿಗೆ ಗಾಯಗಳಾಗಿವೆ. ಇದನ್ನೂ ಓದಿ: ಬೆಂಗಳೂರಲ್ಲಿ ಲಾರಿ-ಆಟೋ ನಡುವೆ ಭೀಕರ ಅಪಘಾತ; ಯುವತಿ ಸಾವು, ಲಾರಿ ಚಾಲಕ ಪರಾರಿ

ಇರಾನ್ ನಮ್ಮ ಮೇಲೆ ದಾಳಿ ಮಾಡಿದರೆ, ನಾವು ಪ್ರತಿದಾಳಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದೇನೆಂದು ಇಸ್ರೇಲ್ ಅಧ್ಯಕ್ಷ ನೆತನ್ಯಾಹು ಹೇಳಿದ್ದಾರೆ. ನೆತನ್ಯಾಹು ವಿಶ್ವಸಂಸ್ಥೆಯಲ್ಲಿ ಹಿಜ್ಬುಲ್ಲಾ ಉಗ್ರರ ವಿರುದ್ಧ ಗುಡುಗಿದ ಬೆನ್ನಲ್ಲೇ ಈ ದಾಳಿ ನಡೆದಿದೆ. ಇದನ್ನೂ ಓದಿ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದವರಿಗೆ ಗಂಗಾಜಲ, ಗೋಮೂತ್ರ ಪ್ರೋಕ್ಷಣೆ ಮಾಡಿ ‘ಶುದ್ಧೀಕರಣ’

‘ಅವರು ಅಂತಹ ದಾಳಿಯಿಂದ ಬದುಕುಳಿದಿದ್ದಾರೆಂದು ಊಹಿಸಿಕೊಳ್ಳುವುದು ಅಸಾಧ್ಯ’ ಎಂದು ಸೇನಾ ಅಧಿಕಾರಿ ತಿಳಿಸಿದರು. ಹಲವಾರು ಹೀಬ್ರೂ ಮಾಧ್ಯಮ ವರದಿಗಳು ಭೂಗತ ಪ್ರಧಾನ ಕಚೇರಿಯ ಮೇಲಿನ ದಾಳಿಯಲ್ಲಿ ನಸ್ರಲ್ಲಾ ಕೊಲ್ಲಲ್ಪಟ್ಟರು ಎಂದು ಇಸ್ರೇಲಿ ವರದಿಗಳು ತಿಳಿಸಿವೆ. ದಾಳಿ ಬೆನ್ನಲ್ಲೇ ನಗರದ ಮೇಲೆ ದಟ್ಟವಾದ ಹೊಗೆ ಆವರಿಸಿಕೊಂಡಿದೆ.

ಇಸ್ರೇಲ್ ದಾಳಿಯಲ್ಲಿ ಆರು ಕಟ್ಟಡಗಳು ಧ್ವಂಸಗೊಂಡಿವೆ ಎಂದು ಹಿಜ್ಬುಲ್ಲಾಗೆ ನಿಕಟವಾದ ಮೂಲವೊಂದು ತಿಳಿಸಿದೆ. ಹಿಜ್ಬುಲ್ಲಾ ಮತ್ತು ಇಸ್ರೇಲ್ ನಡುವಿನ ಸುಮಾರು ಒಂದು ವರ್ಷದ ಸಂಘರ್ಷದಲ್ಲಿ ಬೈರುತ್‌ನಲ್ಲಿ ನಡೆದ ಅತಿದೊಡ್ಡ ದಾಳಿ ಇದಾಗಿದೆ. ದಾಳಿಯಲ್ಲಿ ಸುಮಾರು ಟನ್‌ಗಳಷ್ಟು ಸ್ಫೋಟಕ ಬಾಂಬ್‌ಗಳು ಇದ್ದವು ಎಂದು ಇಸ್ರೇಲಿ ದೂರದರ್ಶನ ಜಾಲಗಳು ವರದಿ ತಿಳಿಸಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಹೆಲೆನ್ ಚಂಡಮಾರುತದ ಆರ್ಭಟ – 33 ಮಂದಿ ಸಾವು

ಇಸ್ರೇಲ್, ಹಮಾಸ್ ಯುದ್ಧಕ್ಕೆ ಹಿಜ್ಬುಲ್ಲಾ ಉಗ್ರರು ಪ್ರವೇಶಿಸಿ ಕಾವು ಹೆಚ್ಚಿಸಿರುವ ಹೊತ್ತಿನಲ್ಲೇ, ಯೆಮೆನ್‌ನ ಹೌತಿ ಉಗ್ರರು ಕೂಡಾ ಯುದ್ಧಕ್ಕೆ ಪ್ರವೇಶ ಮಾಡಿದ್ದಾರೆ. ಇಸ್ರೇಲ್ ದಾಳಿಗೆ ಗುರುವಾರ ಹಿಜ್ಬುಲ್ಲಾ ಉಗ್ರ ಮೊಹಮ್ಮದ್ ಸ್ರುರ್ ಸಾವನ್ನಪ್ಪಿದ್ದ. ಪ್ರತಿಯಾಗಿ ಹೌತಿ ಉಗ್ರರು ಗುರುವಾರ ರಾತ್ರಿ ಕ್ಷಿಪಣಿ ದಾಳಿ ನಡೆಸಿದ್ದಾರೆ. ಈ ಕ್ಷಿಪಣಿಯನ್ನು ಗಡಿಯಿಂದ ಹೊರಗೆ ನಮ್ಮ ವಾಯುರಕ್ಷಣಾ ವ್ಯವಸ್ಥೆ ಹೊಡೆದುರುಲಿಸಿದೆ ಎಂದು ಇಸ್ರೇಲ್ ಹೇಳಿದೆ. ಹೌತಿ ಉಗ್ರರನ್ನು ಸ್ರುರ್ ಬರಂಬಲಿಸುತ್ತಿದ್ದ. ಆತನ್ನು ಇಸ್ರೇಲ್ ಹತ್ಯೆ ಮಾಡಿದ ಕಾರಣ ಹೌತಿ ಸಿಟ್ಟಿಗೆದ್ದಿದೆ. ಇದನ್ನೂ ಓದಿ: ಭಯೋತ್ಪಾದಕ ದಾಳಿ ಎಚ್ಚರಿಕೆ – ಮುಂಬೈನಾದ್ಯಂತ ಪೊಲೀಸರು ಹೈಅಲರ್ಟ್‌

TAGGED:Hasan NasrallahIsraelIsrael Hamas warಇಸ್ರೇಲ್ಜೆರುಸಲೆಂಹಿಜ್ಬುಲ್ಲಾ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

Ukraines Kharkiv missile hits
Latest

ಉಕ್ರೇನ್‌ನ ಖಾರ್ಕಿವ್ ಮೇಲೆ ರಷ್ಯಾ ಮಿಸೈಲ್ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವು

Public TV
By Public TV
20 minutes ago
Vaibhav Sooryavanshi Uncle Abhishek Chauhan
Cricket

UPSC ಪರೀಕ್ಷೆಯಲ್ಲಿ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅಂಕಲ್ ಪಾಸ್

Public TV
By Public TV
43 minutes ago
Raichuru Crime
Court

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
1 hour ago
Chalavadi narayanaswamy
Bengaluru City

ಕಾಂಗ್ರೆಸ್‌ ಅಧಿಕಾರದಲ್ಲಿದ್ರೆ ಮನೆ-ಮನೆಗಳಲ್ಲಿ ಚುನಾವಣೆ ಮಾಡಿ ಗಂಡ-ಹೆಂಡ್ತಿಗೆ ಜಗಳ ತಂದಿಡ್ತಾರೆ: ಛಲವಾದಿ ಕಿಡಿ

Public TV
By Public TV
2 hours ago
Yadagiri UPSC Student
Districts

UPSC ಪರೀಕ್ಷೆಯಲ್ಲಿ ರ‍್ಯಾಂಕ್ ಗಿಟ್ಟಿಸಿಕೊಂಡ ಯಾದಗಿರಿಯ ನಾಲ್ವರು

Public TV
By Public TV
2 hours ago
women falls pit bengaluru
Bengaluru City

ಬೆಂಗಳೂರು| ಕಾಲು ಜಾರಿ 25 ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆ – 8 ಗಂಟೆ ಗುಂಡಿಯಲ್ಲೇ ಪರದಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?