ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ – 100ಕ್ಕೂ ಅಧಿಕ ಜನ ಬಲಿ

Public TV
1 Min Read
Myanmar Military Attack

ನೇಪ್ಯಿಡಾವ್: ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ (Airstrikes) ಮಂಗಳವಾರ ಮಧ್ಯ ಮ್ಯಾನ್ಮಾರ್‌ನಲ್ಲಿ (Myanmar) ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.

ಫೆ.2021ರ ದಂಗೆಯಲ್ಲಿ ಮಿಲಿಟರಿ ಅಧಿಕಾರ ವಶಪಡಿಸಿಕೊಂಡಾಗಿನಿಂದ ಮ್ಯಾನ್ಮಾರ್ ಅವ್ಯವಸ್ಥೆಯಲ್ಲಿದೆ ಮತ್ತು ಅದರ ಆರ್ಥಿಕತೆ (Economy) ಹದಗೆಟ್ಟಿದೆ. ಇದನ್ನು ವಿರೋಧಿಸಿ ಅಲ್ಲಿನ ಜನ ನಿರಂತರವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದರು. ಇದನ್ನೂ ಓದಿ: ನಿವೃತ್ತಿ ಘೋಷಣೆ ಮಾಡಲು ಸಿದ್ಧ, ಆದ್ರೆ ಅದು ಗೌರವಯುತವಾಗಿ ಆಗಬೇಕು: ಶೆಟ್ಟರ್

Myanmar Military Attack 1

ವಿಶ್ವಸಂಸ್ಥೆಯ (United Nations) ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ಮ್ಯಾನ್ಮಾರ್ ಮಿಲಿಟರಿ ಮತ್ತೊಮ್ಮೆ ಜನರಿಗೆ ಸೂಕ್ತ ಆಡಳಿತ ಒದಗಿಸದೆ ಯುದ್ಧದ ನಡವಳಿಕೆಯಿಂದ ನಾಗರಿಕರನ್ನು ನಿರ್ಲಕ್ಷಿಸಿದೆ ಎಂದು ಟರ್ಕ್ (Turk) ಆರೋಪಿಸಿದೆ.

ಅಮೆರಿಕ (America) ವಿದೇಶಾಂಗ ಇಲಾಖೆಯ ವಕ್ತಾರ ವೇದಾಂತ್ ಪಟೇಲ್ ಪ್ರತಿಕ್ರಿಯಿಸಿ, ಹಿಂಸಾತ್ಮಕ ದಾಳಿಗಳ ಆಡಳಿತವು ಮಾನವ ಜೀವನವನ್ನು ಕಡೆಗಣಿಸುತ್ತದೆ. ಅಂತಹ ಆಡಳಿತವನ್ನು ಬಲವಾಗಿ ಖಂಡಿಸುತ್ತೇವೆ. ಫೆಬ್ರವರಿ 2021ರ ದಂಗೆಯ ನಂತರ ಮ್ಯಾನ್ಮಾರ್ ಭೀಕರ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮ್ಯಾನ್ಮಾರ್‍ಗೆ ಮಾನವೀಯ ಜವಾಬ್ದಾರಿಯ ಸರ್ಕಾರ ಬೇಕಿದೆ. ಭೀಕರ ಹಿಂಸಾಚಾರವನ್ನು ನಿಲ್ಲಿಸಿ ಜನರ ಅಂತರ್ಗತ ಪ್ರಜಾಪ್ರಭುತ್ವದ ಆಕಾಂಕ್ಷೆಗಳನ್ನು ಗೌರವಿಸಲು ಅಮೆರಿಕ, ಮ್ಯಾನ್ಮಾರ್ ಆಡಳಿತಕ್ಕೆ ಕರೆ ನೀಡುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ಟಿಕೆಟ್ – ಜಾತಿವಾರು ಲೆಕ್ಕಾಚಾರ ಏನು?

Share This Article