CricketLatestLeading NewsMain PostSports

ಟಿವಿ ಸ್ಕ್ರೀನ್‌ನಲ್ಲೇ ಹಾರ್ದಿಕ್ ಪಾಂಡ್ಯಾಗೆ ಮುತ್ತಿಟ್ಟ ಅಫ್ಘನ್ ಅಭಿಮಾನಿ

ದುಬೈ/ಕಾಬೂಲ್: ಭಾರತೀಯ ಕ್ರಿಕೆಟಿಗರು ವಿಶ್ವದಾದ್ಯಂತ ಅಭಿಮಾನಿಗಳನ್ನ ಹೊಂದಿದ್ದಾರೆ ಎಂಬುದಕ್ಕೆ ಅಫ್ಘಾನಿಸ್ತಾನದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ.

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ 5 ವಿಕೆಟ್‌ಗಳ ಅಂತರದಲ್ಲಿ ಗೆದ್ದು ಬೀಗಿತು. ಕೊನೆಯ ಕ್ಷಣದ ವರೆಗೂ ರೋಚಕತೆಯಿಂದಲೇ ಕೂಡಿದ ಪಂದ್ಯ ಪ್ರತಿ ಎಸೆತದಲ್ಲೂ ಅಭಿಮಾನಿಗಳ ಮೈ ರೋಮಾಂಚನಗೊಳಿಸುತ್ತಿತ್ತು. ಇದನ್ನೂ ಓದಿ: ಅಂದು ಗಾಯಾಳು, ಇಂದು ಮ್ಯಾಚ್ ವಿನ್ನರ್ – ಹಳೆಯ ಘಟನೆ ಬಿಚ್ಚಿಟ್ಟ ಪಾಂಡ್ಯ

ಒತ್ತಡದ ನಡುವೆಯೂ ಬದ್ಧ ವೈರಿ ಪಾಕಿಸ್ತಾನವನ್ನು ಮಣಿಸಿದ ಟೀಂ ಇಂಡಿಯಾ ಖುಷಿಯನ್ನು ಇಡೀ ದೇಶವೇ ಸಂಭ್ರಮಿಸುತ್ತಿತ್ತು. ಇದೇ ವೇಳೆ ವಿದೇಶಗಳಲ್ಲೂ ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಈ ನಡುವೆ ಅಫ್ಘಾನಿಸ್ತಾನದ ಅಭಿಮಾನಿಯೊಬ್ಬ ಟಿವಿ ಸ್ಕ್ರೀನ್‌ನಲ್ಲೇ ಹಾರ್ದಿಕ್ ಪಾಂಡ್ಯಾಗೆ ಮುತ್ತಿಡುವ ಮೂಲಕ ತನ್ನ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಹಾರ್ದಿಕ್ ಪಾಂಡ್ಯಗೆ ಮುತ್ತಿಡುತ್ತಿರುವ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಜನರು ವೀಡಿಯೋ ವೀಕ್ಷಣೆ ಮಾಡಿದ್ದಾರೆ.

ಅಲ್ಲದೇ ಇದೇ ಏಷ್ಯಾಕಪ್ ಟೂರ್ನಿಯಲ್ಲಿ ಸ್ಪರ್ಧೆಗಿಳಿದಿರುವ ಅಫ್ಘಾನಿಸ್ತಾನ್ ಸಹ ಭಾರತ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನೂ ಓದಿ: AsiaCup: ಜಡೇಜಾ ಜಾದು, ಪಾಂಡ್ಯ ಪರಾಕ್ರಮ – ಪಾಕಿಸ್ತಾನದ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ರೋಚಕ ಜಯ

ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 19.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 147 ರನ್‌ಗಳನ್ನು ಗಳಿಸಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಭಾರತ 19.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್‌ಗಳಿಸಿ ಗೆಲುವು ಸಾಧಿಸಿತು.

Live Tv

Leave a Reply

Your email address will not be published.

Back to top button