ಬೆಂಗಳೂರು: ಐಶ್ವರ್ಯ ಗೌಡ (Aishwarya Gowda) ವಂಚನೆ ಪ್ರಕರಣಕ್ಕೆ (Fraud Case) ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿಯವರಿಗೆ (Vinay Kulkarni) ವಿಚಾರಣೆಗೆ ಹಾಜರಾಗುವಂತೆ ಇಡಿ (Enforcement Directorate) ಸಮನ್ಸ್ ಜಾರಿ ಮಾಡಿದೆ.
ಇಂದು (ಮಂಗಳವಾರ) ವಿಚಾರಣೆಗೆ ಹಾಜರಾಗಲು ಇಡಿ ನೋಟಿಸ್ ಜಾರಿ ಮಾಡಿತ್ತು. ಆದರೆ ಕೆಲಸವಿದೆ ಎಂದು ವಿಚಾರಣೆಗೆ ಅವರು ಗೈರಾಗಿದ್ದರು. ಇದರಿಂದ ಗುರುವಾರ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಐಶ್ವರ್ಯಗೌಡ ವಂಚನೆ ಕೇಸ್‌ಗೆ ಟ್ವಿಸ್ಟ್ – ವಿನಯ್ ಕುಲಕರ್ಣಿ ಕಾರು ಚಾಲಕನ ವಿಚಾರಣೆ
ಮಾಜಿ ಸಂಸದ ಡಿ.ಕೆ.ಸುರೇಶ್ (DK Suresh) ಸಹೋದರಿ ಎಂದು ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಐಶ್ವರ್ಯಗೌಡ ವಿರುದ್ಧ ಕೇಸ್ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ. ತನಿಖೆಯ ಮುಂದುವರೆದ ಭಾಗವಾಗಿ ಇಡಿ ಅಧಿಕಾರಿಗಳು ಆರೋಪಿ ಐಶ್ವರ್ಯ ಗೌಡ ಮನೆ, ಕಚೇರಿ, ಶಾಸಕ ವಿನಯ್ ಕುಲಕರ್ಣಿ ಮನೆ ಸೇರಿ ಒಟ್ಟು 14 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮಹತ್ವದ ದಾಖಲೆಗಳು ಪತ್ತೆಯಾಗಿದ್ದವು. ದಾಳಿ ವೇಳೆ 2.25 ಕೋಟಿ ರೂ. ನಗದು ಪತ್ತೆಯಾಗಿರುವುದಾಗಿ ಇಡಿ ಪ್ರಕಟಣೆ ಮೂಲಕ ತಿಳಿಸಿತ್ತು.
ಐಶ್ವರ್ಯಗೌಡ ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಕಾರನ್ನು ಉಡುಗೊರೆಯಾಗಿ ನೀಡಿದ್ದರು ಎನ್ನಲಾಗಿತ್ತು. ಆ ಕಾರನ್ನು ಪೊಲೀಸರು ಸೀಜ್ ಮಾಡಿದ್ದರು. ಐಶ್ವರ್ಯ ಗೌಡ ಹಾಗೂ ವಿನಯ್ ಕುಲಕರ್ಣಿ ನಡುವೆ ವ್ಯವಹಾರಿಕ ಸಂಬಂಧ ಇದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಐಶ್ವರ್ಯಗೌಡ ಉಡುಗೊರೆಯಾಗಿ ಕೊಟ್ಟಿದ್ದ ಕಾರು ಸೀಜ್