ಬೆಂಗಳೂರು: ಐಶ್ವರ್ಯ ಗೌಡ (Aishwarya Gowda) ಚಿನ್ನ ವಂಚನೆ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಕಾರು ಚಾಲಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಎಸಿಪಿ ಭರತ್ ರೆಡ್ಡಿ ಅವರು ಚಾಲಕ ವಿರೇಶ್ ದಳವಾಯಿಯನ್ನು ವಿಚಾರಣೆ ಮಾಡಿದ್ದಾರೆ. ಐಶ್ವರ್ಯ ಗೌಡಗೆ ಸೇರಿದ ಕಾರು ವಿನಯ್ ಕುಲಕರ್ಣಿ ಮನೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಚಾಲಕನನ್ನು ಪೊಲೀಸರು ವಿಚಾರಣೆಗೆ ಕರೆದಿದ್ದರು. ವಿಚಾರಣೆ ವೇಳೆ ಬೆನ್ಜ್ ಕಾರಿನ ಬಗ್ಗೆ ಮಾಹಿತಿ ಲಭ್ಯವಾಗಿದೆ.
Advertisement
Advertisement
ವಿನಯ್ ಕುಲಕರ್ಣಿಗೆ ಐಶ್ವರ್ಯ ಗೌಡ ಪರಿಚಯವಿತ್ತು. ಮಹಾರಾಷ್ಟ್ರಕ್ಕೆ ಹೋಗುವಾಗ ವಿನಯ್ ಕುಲಕರ್ಣಿ ಮನೆಗೆ ಐಶ್ವರ್ಯ ಗೌಡ ಬಂದಿದ್ದರು. ವಾಪಸ್ ಹೋಗುವಾಗ ಕಾರು ಬಿಟ್ಟು ವಿಮಾನದಲ್ಲಿ ಹೋಗಿದ್ದರು. ಹಾಗಾಗಿ, ಬೆನ್ಜ್ ಕಾರು ವಿನಯ್ ಕುಲಕರ್ಣಿ ಮನೆ ಬಳಿಯೇ ಇತ್ತು ಅನ್ನೋದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.
Advertisement
Advertisement
ವಂಚನೆ ಪ್ರಕರಣದ ತನಿಖೆ ಬಹುತೇಕ ಕೊನೆಯ ಹಂತಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.