ನವದೆಹಲಿ: ಖ್ಯಾತ ಬಾಲಿವುಡ್ ನಟಿ ಐಶ್ಚರ್ಯ ರೈ ಬಚ್ಚನ್‍ಗೆ ಪಿತೃವಿಯೋಗವಾಗಿದೆ. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಐಶ್ವರ್ಯರೈ ತಂದೆ ಕೃಷ್ಣರಾಜ್ ರೈ ಶನಿವಾರ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಅಸುನೀಗಿದರು.
ಕೃಷ್ಣರಾಜ್ ರೈ ಅವರಿಗೆ 78 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇವರು ಕಳೆದ ಎರಡು ವಾರಗಳಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಅವರ ಅಂತ್ಯಕ್ರಿಯೆ ನಿನ್ನೆ ಸಂಜೆಯೇ ಮುಂಬೈನಲ್ಲಿ ನೆರವೇರಿತು.
ಕೃಷ್ಣರಾಜ್ ಅವರು ಮೂಲತಃ ಮಂಗಳೂರಿನ ಕೌಡೂರು ಮೂಲದವರಾಗಿದ್ದು, ಮುಂಬೈನಲ್ಲಿ ನೆಲೆಸಿದ್ದರು. ಮೃತರು ಪತ್ನಿ, ಮಗಳು, ಮಗ ಮತ್ತು ಮೊಮ್ಮಗಳನ್ನು ಅಗಲಿದ್ದಾರೆ.