ಮುಂಬೈ: ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಬಚ್ಚನ್ ತಮ್ಮ ಮುಂಬರುವ ಫೆನ್ನೆ ಖಾನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಏ ದಿಲ್ ಹೈ ಮುಷ್ಕಿಲ್ ಬಳಿಕ ನಟಿಸುತ್ತಿರುವ ಚಿತ್ರ ಇದಾಗಿದ್ದು, ಈಗಾಗಲೇ ಸಿನಿಮಾ ಬಾಲಿವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ.
ಸದ್ಯ ಫೆನ್ನೆ ಖಾನ್ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ನಮಗೆ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿ ಚಿತ್ರೀಕರಣ ನಿಲ್ಲಿಸಲು ಮುಂದಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Advertisement
Advertisement
ಫೆನ್ನೆ ಖಾನ್ ಸಿನಿಮಾದೊಂದಿಗೆ ಕಾರ್ಯನಿರ್ವಹಿಸುವ ಸಿಬ್ಬಂದಿ ಒಪ್ಪಂದ ಮಾಡಿಕೊಂಡಿತ್ತು. ಒಪ್ಪಂದದ ಪ್ರಕಾರ ಮಾರ್ಚ್ ಅಂತ್ಯದೊಳಗೆ ಎಲ್ಲ ಸಿಬ್ಬಂದಿಯ ವೇತನ ಪಾವತಿಯಾಗಬೇಕಿತ್ತು. ಕಾರಣಾಂತರಗಳಿಂದ ಸಿಬ್ಬಂದಿ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ. ಚಿತ್ರಕ್ಕಾಗಿ ಐಶ್ವರ್ಯ ಡೇಟ್ ನೀಡಿದ್ದು, ಶೂಟಿಂಗ್ ನಿಂತರೆ ಐಶ್‍ಗೆ ತಮ್ಮ ಮುಂದಿನ ಕಾರ್ಯಕ್ರಮಗಳಿಗೆ ಅಡ್ಡಿಯಾಗಲಿದೆ. ಬ್ಯುಸಿ ಶೆಡ್ಯೂಲ್ ನಲ್ಲಿರುವ ಐಶ್ ಮತ್ತೊಮ್ಮೆ ಫೆನ್ನೆ ಖಾನ್ ಡೇಟ್ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಸದ್ಯ ಐಶ್ವರ್ಯ ರೈ ಪಾತ್ರದ ಚಿತ್ರೀಕರಣ ನಡೆಯುತ್ತಿದ್ದರಿಂದ ಬೇರೆ ಕಲಾವಿದರು ಈ ತೊಂದರೆಯಿಂದ ತಪ್ಪಿಸಿಕೊಂಡಿದ್ದಾರೆ.
Advertisement
ಐಶ್ವರ್ಯಗೆ ಜೊತೆಯಾಗಿ ಅನಿಲ್ ಕಪೂರ್ ನಟಿಸುತ್ತಿದ್ದಾರೆ. ವಿಶೇಷ ಪಾತ್ರದಲ್ಲಿ ರಾಜ್‍ಕುಮಾರ್ ರಾವ್ ಸಹ ನಟಿಸುತ್ತಿದ್ದಾರೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಅತುಲ್ ಮಂಜ್ರೇಕರ್ ನಿರ್ದೇಶನದಲ್ಲಿ ಸಿನಿಮಾ ಮೂಡಿಬರುತ್ತಿದ್ದು, ಜುಲೈ 13ರಂದು ತೆರೆಕಾಣಲಿದೆ ಅಂತಾ ಚಿತ್ರತಂಡ ಹೇಳಿದೆ.