ಬೆಂಗಳೂರು: ಹಿಂದಿ ಎಂದಿಗೂ ಮತ್ತು ಎಂದಿಗೂ ನಮ್ಮ ರಾಷ್ಟ್ರೀಯ ಭಾಷೆಯಾಗುವುದಿಲ್ಲ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯ ಬಾಲಿವುಡ್ ನಟ ಅಜಯ್ ದೇವಗನ್‌ಗೆ ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ ಅವರು, ನಮ್ಮ ದೇಶದ ಭಾಷಾ ವೈವಿಧ್ಯತೆಯನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಪ್ರತಿಯೊಂದು ಭಾಷೆಯು ತನ್ನದೇ ಆದ ಶ್ರೀಮಂತ ಇತಿಹಾಸವನ್ನು ಹೊಂದಿದೆ, ಅದರ ಜನರು ಹೆಮ್ಮೆಪಡುತ್ತಾರೆ. ನಾನೊಬ್ಬ ಕನ್ನಡಿಗ ಎಂದು ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಪಾನ್ ಇಂಡಿಯಾ’ ಸ್ಟಾರ್‌ಗೆ ‘ಪ್ಯಾನ್ ಇಂಡಿಯಾ’ ಸ್ಟಾರ್ ಗುನ್ನಾ – ಸುದೀಪ್ ಬೆನ್ನಿಗೆ ನಿಂತ ಸ್ಯಾಂಡಲ್‍ವುಡ್
Advertisement
Advertisement
ಟ್ವೀಟ್ ಮಾಡಿದ್ದು ಯಾಕೆ?
ಇತ್ತೀಚಿಗೆ ಉಪೇಂದ್ರ ಚಿತ್ರದ ಟೈಟಲ್ ಲಾಂಚ್ ವೇಳೆ ಕೆಜಿಎಫ್-2 ಯಶಸ್ಸಿನ ಕುರಿತಾಗಿ ಮಾತನಾಡಿದ್ದ ನಟ ಕಿಚ್ಚ ಸುದೀಪ್, ಹಿಂದಿ ರಾಷ್ಟ್ರ ಭಾಷೆಯಲ್ಲ. ಅದು ರಾಷ್ಟ್ರಭಾಷೆಯಾಗಿ ಉಳಿದಿಲ್ಲ ಎಂದು ಹೇಳಿದ್ದರು. ಹಿಂದಿಯವರು ಪ್ಯಾನ್ ಇಂಡಿಯಾ ಮೂವಿ ಮಾಡುತ್ತಿದ್ದಾರೆ. ಬಾಲಿವುಡ್ ಸಿನಿಮಾಗಳನ್ನು ದಕ್ಷಿಣದ ಭಾಷೆಗಳಿಗೆ ಡಬ್ ಮಾಡುತ್ತಿದ್ದಾರೆ. ಆದರೂ ಕ್ಲಿಕ್ ಆಗುತ್ತಿಲ್ಲ. ಆದರೆ ನಮ್ಮ ಸಿನಿಮಾಗಳು ಎಲ್ಲಾ ಕಡೆ ಸದ್ದು ಮಾಡುತ್ತಿವೆ ಎಂದಿದ್ದರು. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ
Advertisement
Hindi was never & will never be our National Language.
It is the duty of every Indian to respect linguistic diversity of our Country.
Each language has its own rich history for its people to be proud of.
I am proud to be a Kannadiga!! https://t.co/SmT2gsfkgO
— Siddaramaiah (@siddaramaiah) April 27, 2022
Advertisement
ಕಿಚ್ಚ ಸುದೀಪ್ ಅವರ ಹೇಳಿಕೆ ಈಗ ಬಾಲಿವುಡ್ ಮಂದಿಯ ಕಣ್ಣು ಕೆಂಪಗಾಗಿಸಿದೆ. ಇವತ್ತು ಅಜಯ್ ದೇವಗನ್ ಹಿಂದಿಯಲ್ಲಿ ಟ್ವೀಟ್ ಮಾಡಿ, `ಪ್ರಿಯ ಸಹೋದರ ಕಿಚ್ಚ ಸುದೀಪ್ ನಿಮ್ಮ ಪ್ರಕಾರ ಹಿಂದಿ ರಾಷ್ಟ್ರಭಾಷೆ ಅಲ್ಲ ಎನ್ನುವುದಾದರೆ ನೀವು ನಿಮ್ಮ ಮಾತೃಭಾಷೆಯ ಚಿತ್ರಗಳನ್ನ ಹಿಂದಿಯಲ್ಲಿ ಡಬ್ ಮಾಡಿ, ಏಕೆ ರಿಲೀಸ್ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರ ಭಾಷೆ ಹಿಂದಿ ಎಂದೆಂದಿಗೂ ರಾಷ್ಟ್ರಭಾಷೆಯೇ ಆಗಿ ಉಳಿಯಲಿದೆ ಎಂದು ಸುದೀಪ್‍ಗೆ ತಿರುಗೇಟು ನೀಡಿದ್ದರು. ಈ ವಿಚಾರದ ಬಗ್ಗೆ ಈಗ ಭಾರೀ ಚರ್ಚೆ ನಡೆಯುತ್ತಿದೆ.