ಲಕ್ನೋ: ಕಳೆದ ವರ್ಷ ನಡೆದ ಲಖಿಂಪುರ ಗಲಾಟೆಯಲ್ಲಿ ಮುಖ್ಯ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್‍ನ ಲಕ್ನೋ ಪೀಠ ಜಾಮೀನು ಮಂಜೂರು ಮಾಡಿದೆ.
ಕಳೆದ ವರ್ಷ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಆಶಿಶ್ ಮಿಶ್ರಾ ಎಂಬ ಆರೋಪಪಟ್ಟಿಯಲ್ಲಿ ಪ್ರಕರಣದ ಪ್ರಮುಖ ಆರೋಪಿ ಎಂದು ಹೆಸರಿಸಿತ್ತು. ಪ್ರತಿಭಟನಾನಿರತ ರೈತರ ಹತ್ಯೆಗೆ ಯೋಜಿತ ಸಂಚು ನಡೆದಿದೆ ಎಂದು ಹೇಳಿತ್ತು. 5,000 ಪುಟಗಳ ಚಾರ್ಜ್‍ಶೀಟ್‍ನಲ್ಲಿ, ಪ್ರಕರಣದ ಆರೋಪಿಗಳ ಸಂಖ್ಯೆಯನ್ನು 14ಕ್ಕೆ ಹೆಚ್ಚಿಸಲಾಗಿದೆ.
ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಸಂದರ್ಭದಲ್ಲಿ 2021ರ ಅಕ್ಟೋಬರ್ 3ರಂದು ನಡೆದ ಲಖಿಂಪುರ ಖೇರಿ ಹಿಂಸಾಚಾರ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದರು. ಘಟನೆ ಸಂಬಂಧ ಆಶಿಶ್ ಮಿಶ್ರಾ ಮತ್ತು ಕೇಂದ್ರದ ಮಾಜಿ ಸಚಿವ ಅಖಿಲೇಶ್ ದಾಸ್ ಅವರ ಸೋದರಳಿಯ ಅಂಕಿತ್ ದಾಸ್ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಅ.9ರಂದು ಮಿಶ್ರಾ ಅವರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಬಹುಮಾನ ಘೋಷಣೆ ಮಾಡಿದ ಸಂಘಟನೆಯ ಬಗ್ಗೆ ಸಮಗ್ರ ತನಿಖೆಯಾಗಬೇಕು: ಯತ್ನಾಳ್
ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಆರಂಭವಾದ ದಿನವೇ ಆಶಿಶ್ ಮಿಶ್ರಾಗೆ ಜಾಮೀನು ದೊರೆತಿದ್ದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರೈತ ಸಮುದಾಯದ ಪ್ರಾಬಲ್ಯವಿರುವ ಪಶ್ಚಿಮ ಉತ್ತರಪ್ರದೇಶದಲ್ಲಿ ಇಂದಿನಿಂದ ಮೊದಲನೇ ಹಂತದ ಮತದಾನ ಪ್ರಾಭವಾಗಿದೆ. ಇನ್ನೂ 6 ಹಂತದ ಮತದಾನ ಬಾಕಿಯಿದೆ. ಇದನ್ನೂ ಓದಿ: ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್