ನನ್ ಮಗಳೇ ಹೀರೋಯಿನ್, ಎಂ.ಆರ್.ಪಿ. ರೀತಿಯ ಹಾಸ್ಯಮಯ ಚಲನಚಿತ್ರಗಳನ್ನು ನಿರ್ದೇಶನ ಮಾಡಿಕೊಂಡು ಬಂದಿರುವ ಎಸ್.ಕೆ. ಬಾಹುಬಲಿ (S.K. Baahubali) ಅವರು ಇದೇ ಮೊದಲಬಾರಿಗೆ ಮಲ್ಟಿ ಸ್ಟಾರ್ ಇಟ್ಟುಕೊಂಡು ಮಾಸ್ ಎಂಟರ್ಟೈನರ್ ಸಿನಿಮಾಗೆ ಆಕ್ಷನ್ ಕಟ್ ಹೇಳಲು ಹೊರಟಿದ್ದಾರೆ.
ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar) ಹಾಗೂ ಕೃಷ್ಣ ಅಜಯ್ ರಾವ್ (Ajay Rao) ಇಬ್ಬರ ಕಾಂಬಿನೇಷನ್ ನಲ್ಲಿ ಹೊಸ ಚಿತ್ರವೊಂದನ್ನು ಬಾಹುಬಲಿ ನಿರ್ದೇಶನ ಮಾಡುತ್ತಿದ್ದಾರೆ. ನಟ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ವಿಶೇಷವಾಗಿ ಈ ಚಿತ್ರದ ಫಸ್ಟ್ ಲುಕ್ (First Look) ಪೋಸ್ಟರನ್ನು ಇಂದು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ನಟಿ, ಡೆಲಿವರಿ ಆಗ್ತಿದ್ದಂತೆ ಶೂಟಿಂಗ್ ಹಾಜರಾದ ಮಮತಾ
ಕುತೂಹಲ ಕೆರಳಿಸುವ ಆಕ್ಷನ್, ಡ್ರಾಮಾ ಕಥಾಹಂದರ ಒಳಗೊಂಡ ಈ ಚಿತ್ರಕ್ಕೆ ಬಾಹುಬಲಿ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಪಿ.ಕೆ. ಪ್ರೊಡಕ್ಷನ್ಸ್ ಬ್ಯಾನರ್ ಮೂಲಕ ಕಿರಣ್ ಅವರು ಬಿಗ್ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಚಿತ್ರದ ಪ್ರಿಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಸಂಪೂರ್ಣ ಮಾಹಿತಿ ಹೊರಬೀಳಲಿದೆ.
ಈ ದಿನ ಶಿವಣ್ಣ ಅಭಿನಯಿಸಲಿರುವ ಅನೇಕ ಚಲನಚಿತ್ರಗಳ, ಸಿನಿಮಾ ಶೀರ್ಷಿಕೆಗಳ ಅನೌನ್ಸ್ ಆಗಿದೆ. ಆ ಚಿತ್ರಗಳಲ್ಲಿ ‘ಧೀರ’ ಚಿತ್ರವೂ ಒಂದು. ಹೆಚ್.ಸಿ. ಶ್ರೀನಿವಾಸ್ (ಶಿಲ್ಪ ಶ್ರೀನಿವಾಸ್) ಅರ್ಪಿಸುತ್ತಿರುವ ಈ ಚಿತ್ರವನ್ನು ಚಿಲ್ಲಿ ಫಿಲಂಸ್ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ಸಾಗರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ನವೀನ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
Web Stories