ಮುಂಬೈ: 16ನೇ ಆವೃತ್ತಿಯ ಐಪಿಎಲ್‌ನಲ್ಲಿ (IPL 2023) ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಮೊದಲ ಪಂದ್ಯವಾಡಿದ ಕ್ರಿಕೆಟಿಗ ಅಜಿಂಕ್ಯ ರಹಾನೆ (Ajinkya Rahane) ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಕೆಲ ದಿನಗಳ ಹಿಂದೆ ಕಳಪೆ ಬ್ಯಾಟಿಂಗ್‌ನಿಂದ ಟೀಕೆಗೆ ಗುರಿಯಾಗಿದ್ದ ರಹಾನೆ ಇದೀಗ ತಮ್ಮ ಬ್ಯಾಟ್ ಮೂಲಕವೇ ಉತ್ತರ ಕೊಟ್ಟಿದ್ದಾರೆ.
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ 19 ಎಸೆತಗಳಲ್ಲೇ ಅರ್ಧ ಶತಕ ಸಿಡಿಸುವ ಮೂಲಕ 2023ರ ಐಪಿಎಲ್ ಆವೃತ್ತಿಯಲ್ಲಿ ವೇಗದ ಅರ್ಧಶತಕ ಬಾರಿಸಿದ ಮೊದಲಿಗ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೋಟಿ ಕೋಟಿ ಸುರಿದು ಖರೀದಿಸಿದ ಆಟಗಾರರು ಬ್ಯಾಟಿಂಗ್‌ನಲ್ಲಿ ಫ್ಲಾಪ್ – ಮಾಲೀಕರಿಗೆ ನಿರಾಸೆ
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ (Jos Buttler) 20 ಎಸೆತಗಳಲ್ಲಿ 50 ರನ್ (6 ಬೌಂಡರಿ, 3 ಭರ್ಜರಿ ಸಿಕ್ಸರ್) ಚಚ್ಚಿದ್ದರು. ಕಳೆದ ಎರಡು ದಿನಗಳ ಹಿಂದೆಯೂ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡದ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಈ ವರ್ಷದ ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ 2ನೇ ಆಟಗಾರ ಹಾಗೂ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದರು.
ಇದೀಗ ಅಜಿಂಕ್ಯ ರಹಾನೆ ಕೇವಲ 19 ಎಸೆತಗಳಲ್ಲೇ 50 ರನ್ ಸಿಡಿಸಿ ಸಾಧನೆ ಮಾಡಿದ್ದಾರೆ. ಇದರಲ್ಲಿ 6 ಬೌಂಡರಿ, 3 ಭರ್ಜರಿ ಸಿಕ್ಸರ್ ಸೇರಿವೆ. ಈ ಪಂದ್ಯದಲ್ಲಿ ರಹಾನೆ 27 ಎಸೆತಗಳಲ್ಲಿ 61 ರನ್ (7 ಬೌಂಡರಿ, 3 ಸಿಕ್ಸರ್) ಸಿಡಿಸಿ ತಂಡಕ್ಕೆ ನೆರವಾಗಿದ್ದಾರೆ. ಇದನ್ನೂ ಓದಿ: IPL 2023: ಯಶಸ್ವಿ, ಬಟ್ಲರ್ ಬೊಂಬಾಟ್ ಬ್ಯಾಟಿಂಗ್ – ರಾಜಸ್ಥಾನ್‌ಗೆ 57 ರನ್‌ಗಳ ಭರ್ಜರಿ ಜಯ
ಕೆಲ ದಿನಗಳ ಹಿಂದೆ ರಹಾನೆ ಬ್ಯಾಟಿಂಗ್ ಲಯ ಕಳೆದುಕೊಂಡು ಟೀಕೆಗೆ ಗುರಿಯಾಗಿದ್ದರು. ಇದೇ ಕಾರಣಕ್ಕೆ 2022ರ ಸಾಲಿನಲ್ಲಿ ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಿಂದಲೂ ರಹಾನೆಗೆ ಭಾರತ ತಂಡದಿಂದ ಕೊಕ್ ಕೊಡಲಾಗಿತ್ತು. ಆ ನಂತರ 2022-23ರ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಪರ ಆಡುವ ಮೂಲಕ ಉತ್ತಮ ಕಮ್‌ಬ್ಯಾಕ್ ಮಾಡಿದ್ದರು.