ಮುಂಬೈ: ಜೂನ್ 7 ರಿಂದ 11ರ ವರೆಗೆ ಲಂಡನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ (WTC) ಬಿಸಿಸಿಐ (BCCI) ಟೀಂ ಇಂಡಿಯಾ ಆಟಗಾರರನ್ನ ಆಯ್ಕೆ ಮಾಡಿದೆ.
15 ಜನರ ಬಲಿಷ್ಠ ಆಟಗಾರರ ತಂಡವನ್ನ ಬಿಸಿಸಿಐ ಪ್ರಕಟಿಸಿದ್ದು, ತಂಡದಲ್ಲಿ ಅಜಿಂಕ್ಯಾ ರಹಾನೆಗೆ (Ajinkya Rahane) ಸ್ಥಾನ ನೀಡಲಾಗಿದೆ. ಆದರೆ ಏಕದಿನ ಕ್ರಿಕೆಟ್‌ನಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಎದುರಿಸಿದ್ದ ಸೂರ್ಯಕುಮಾರ್ ಯಾದವ್‌ಗೆ (Suryakumar Yadav) ಕೊಕ್ ನೀಡಲಾಗಿದೆ. ಇದನ್ನೂ ಓದಿ: ಲಂಕಾ ವಿರುದ್ಧ ಕಿವೀಸ್‌ಗೆ ರೋಚಕ ಜಯ – 2ನೇ ಬಾರಿ WTC ಫೈನಲ್‌ಗೆ ಭಾರತ
Advertisement
Advertisement
ಟೀಂ ಇಂಡಿಯಾ (Team India) ಪರ 82 ಟೆಸ್ಟ್ ಪಂದ್ಯಗಳನ್ನಾಡಿರುವ ಅಜಿಂಕ್ಯಾ ರಹಾನೆ 2022ರ ಜನವರಿಯಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು. ಆ ನಂತರ ರಹಾನೆ ಕಳಪೆ ಫಾರ್ಮ್‌ನಿಂದಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಕಳೆದುಕೊಂಡಿದ್ದರು. ಇದೀಗ 2023ರ 16ನೇ ಐಪಿಎಲ್ (IPL 2023) ಆವೃತ್ತಿಯಲ್ಲಿ ರಹಾನೆ ಚೆನ್ನೈಸೂಪರ್ ಕಿಂಗ್ಸ್ (CSK) ಪರ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. 5 ಪಂದ್ಯಗಳಲ್ಲಿ 209 ರನ್ ಬಾರಿಸಿದ್ದಾರೆ. 52.25 ಸರಾಸರಿಯಲ್ಲಿರುವ ರಹಾನೆ 199.04 ಸ್ಟ್ರೈಕ್‌ರೇಟ್ ಕಾಯ್ದುಕೊಂಡಿದ್ದಾರೆ.
Advertisement
Advertisement
ಅಲ್ಲದೇ ಐಪಿಎಲ್‌ಗೂ ಮುನ್ನ ನಡೆದ ರಣಜಿ ಟೂರ್ನಿಯಲ್ಲೂ ರಹಾನೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಟೀಂ ಇಂಡಿಯಾದಲ್ಲಿ ಮತ್ತೆ ಚಾನ್ಸ್ ನೀಡಿದೆ. ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಸಹ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆದರೆ ಸೂರ್ಯಕುಮಾರ್ ಯಾದವ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಇದನ್ನೂ ಓದಿ: WTC ಫೈನಲ್ ಭಾರತ ಗೆದ್ದರೆ ಬೆತ್ತಲಾಗುವೆ – ಪೂನಂ ಪಾಂಡೆ
ಇದರೊಂದಿಗೆ ಕುಲ್‌ದೀಪ್ ಯಾದವ್, ಇಶಾನ್ ಕಿಶನ್ ಸಹ ತಂಡದಿಂದ ಹೊರಗುಳಿದಿದ್ದಾರೆ. ಶ್ರೇಯಸ್ ಅಯ್ಯರ್ ಅವರಿಗೆ ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆಗಳಿತ್ತು. ಆದ್ರೆ ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಅವಕಾಶ ಕೈತಪ್ಪಿದೆ. ಈ ಬಾರಿ ಐಪಿಎಲ್‌ನಲ್ಲೂ ಕೆಕೆಆರ್ ತಂಡದ ಪರವಾಗಿ ಒಂದು ಪಂದ್ಯವನ್ನೂ ಆಡಿಲ್ಲ.
WTC ಭಾರತ ತಂಡ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಲ್ ರಾಹುಲ್, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕಟ್.
ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದ್ದು ಹೇಗೆ?
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಭಾರತ 3-0 ಅಥವಾ 3-1 ಅಂತರದಲ್ಲಿ ಗೆಲ್ಲಬೇಕಾಗಿತ್ತು. ಆದ್ರೆ ಭಾರತ 2-1 ರಲ್ಲಿ ಮುನ್ನಡೆ ಸಾಧಿಸಿತ್ತು. ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಗೆಲುವು ಅಗತ್ಯವಿತ್ತು. ಅಂತಿಮ ಪಂದ್ಯ ಡ್ರಾ ನಲ್ಲಿ ಅಂತ್ಯಗೊಂಡಿದ್ದರಿಂದ ಫೈನಲ್ ಪ್ರವೇಶಿಸುವ ಹಾದಿ ಕಠಿಣವಾಗಿತ್ತು.
ಮತ್ತೊಂದೆಡೆ ಶ್ರೀಲಂಕಾ ತಂಡ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಅಗತ್ಯವಿತ್ತು. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲೇ ನ್ಯೂಜಿಲೆಂಡ್ ಎದುರು ಕೇವಲ 2 ವಿಕೆಟ್‌ಗಳ ವಿರೋಚಿತ ಸೋಲು ಅನುಭವಿಸುವ ಮೂಲಕ ಫೈನಲ್ ರೇಸ್‌ನಿಂದ ಹೊರ ಬಿದ್ದಿತು. ಭಾರತ 60.29 ಪಿಸಿಟಿಯೊಂದಿಗೆ (Percentage Of Points Earned) ಫೈನಲ್ ಪ್ರವೇಶಿಸಿತು.