ಮುಂಬೈ: ಶಿವಸೇನೆ (Shivsena) ಒಡೆದಂತೆ ಮಹಾರಾಷ್ಟ್ರದಲ್ಲಿ ಎನ್‌ಸಿಪಿ (NCP) ಒಡೆಯುತ್ತಾ ಎಂಬ ಅನುಮಾನ ಸೃಷ್ಟಿಯಾಗಿದೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ (Ajit Pawar) ಅವರು ಬಿಜೆಪಿ-ಶಿಂಧೆ ಶಿವಸೇನೆ ಸರ್ಕಾರದಲ್ಲಿ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ಜತೆ ಸೇರಲು 53 ಎನ್‌ಸಿಪಿ ಶಾಸಕರ ಪೈಕಿ 40 ಶಾಸಕರ ಸಹಿ ಪಡೆದಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ವರದಿಯ ನಡುವೆ ಅಜಿತ್ ಪವಾರ್ ಸಾಮಾಜಿಕ ಜಾಲತಾಣದಲ್ಲಿ ಎನ್‌ಸಿಪಿ ಲೋಗೋವನ್ನು ತೆಗೆದಿದ್ದು ಅಂತೆ-ಕಂತೆ ಸುದ್ದಿಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ಬಂದಿದೆ.
Advertisement
Advertisement
ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅಜಿತ್ ಪವಾರ್, ಜೀವ ಇರುವವರೆಗೂ ನಾನು ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ. ನಾನು ಬಿಜೆಪಿ ಸೇರುತ್ತೇನೆ ಎನ್ನುವ ವರದಿಗಳಲ್ಲಿ ಸುಳ್ಳು. ನಾನು ಸೇರಿದಂತೆ ಎಲ್ಲಾ ಶಾಸಕರು ಎನ್‌ಸಿಪಿಯೊಂದಿಗೆ ಇದ್ದೇವೆ ಎಂದು ಅಜಿತ್ ಪವಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದ ಮೊದಲ ಆ್ಯಪಲ್ ಸ್ಟೋರ್ ಮುಂಬೈನಲ್ಲಿ ಉದ್ಘಾಟನೆ – ಗ್ರಾಹಕರಿಗೆ ಅನುಕೂಲಗಳೇನಿದೆ?
Advertisement
ಅಜಿತ್ ಪವಾರ್ ನಮ್ಮ ಪಕ್ಷದಲ್ಲೇ ಇರುತ್ತಾರೆ. ಈ ಸುದ್ದಿಗಳು ಎಲ್ಲವೂ ಸುಳ್ಳು ಎಂದು ಎನ್‌ಸಿಪಿ ವರಿಷ್ಟ ಶರದ್ ಪವಾರ್ (Sharad Pawar) ಸ್ಪಷ್ಟಪಡಿಸಿದ್ದಾರೆ.
Advertisement
ಮಹಾರಾಷ್ಟ್ರ ಚುನಾವಣೆಯಲ್ಲಿ ಶಿವಸೇನೆ- ಬಿಜೆಪಿ ಮೈತ್ರಿಕೂಟ ಜಯಗಳಿಸಿತ್ತು. ನಂತರ ಶಿವಸೇನೆ ಮುಖ್ಯಸ್ಥ ಉದ್ದವ್ ಠಾಕ್ರೆ ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದು ಬಿಜೆಪಿ ಜೊತೆ ಮೈತ್ರಿ ಕಡಿದು ಎನ್‌ಸಿಪಿ, ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಶಿವಸೇನೆ ನಾಯಕ ಏಕ್‌ನಾಥ್ ಶಿಂಧೆ ಜೊತೆ ಶಿವಸೇನೆ ಶಾಸಕರ ಕೈ ಜೋಡಿಸಿದ ಪರಿಣಾಮ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಏರಿತ್ತು.