ಹಾವೇರಿ: ಶಿಗ್ಗಾಂವಿ ಉಪಚುನಾವಣೆ (Shiggaon By Election) ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಇವತ್ತು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ (Ajjappir Khadri) ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.
ಹುಬ್ಬಳ್ಳಿಯಿಂದ (Hubballi) ಸಚಿವ ಜಮೀರ್ ಅಹ್ಮದ್ ಖಾನ್ ಜೊತೆ ಆಗಮಿಸಿ ಖಾದ್ರಿ, ಬೆಂಬಲಿಗರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಖಾದ್ರಿ ಸೂಕ್ತವಾದ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್
- Advertisement -
- Advertisement -
ಜಮೀರ್ ಜೊತೆಗೆ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್ ಪಕ್ಷದ ಯಾಸಿರ್‌ಖಾನ್ ಪಠಾಣ್‌ಗೆ ಬೆಂಬಲ ಸೂಚಿಸಿದರು. ನನಗೆ ಟಿಕೆಟ್ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ. ಸಿದ್ದರಾಮಯ್ಯ (Siddaramaiah), ಡಿಕೆಶಿ ಸೇರಿದಂತೆ ಪ್ರಮುಖ ನಾಯಕರು ಮಾತನಾಡಿದ್ದು, ಸಿಎಂಗೆ ಬೆಂಬಲ ಸೂಚಿಸಿದ್ದೇನೆ. ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ಉಪಚುನಾವಣೆಗೆ ಸಮಸ್ಯೆ ಮಾಡೋಕೆ ಬಿಜೆಪಿಯಿಂದ ಪ್ರತಿಭಟನೆ: ಸಿಎಂ
- Advertisement -